ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಖಲೀದಾ ಜಿಯಾಗೆ ಜಾಮೀನು

Last Updated 18 ಜೂನ್ 2019, 19:02 IST
ಅಕ್ಷರ ಗಾತ್ರ

ಢಾಕಾ: ಹತ್ತು ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಬಾಂಗ್ಲಾದೇಶದ ಮಾಜಿ ಪ್ರಧಾನಿ ಹಾಗೂ ವಿರೋಧ ಪಕ್ಷ ಬಿಎನ್‌ಪಿ ಮುಖ್ಯಸ್ಥೆ ಖಲೀದಾ ಜಿಯಾ ಅವರಿಗೆ, ಎರಡು ಮಾನಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಮಂಗಳವಾರ ಆರು ತಿಂಗಳ ಜಾಮೀನು ಮಂಜೂರು ಮಾಡಿದೆ.

ಈ ಜಾಮೀನು ದೊರೆತ ಮಾತ್ರಕ್ಕೆ, ಜಿಯಾ ಅವರ ಬಿಡುಗಡೆ ಆಗುವುದಿಲ್ಲ. ಏಕೆಂದರೆ ಅವರು ಇನ್ನೆರಡು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿದ್ದಾರೆ. ಜಿಯಾ ಅವರು ಮೂರು ಬಾರಿ ಬಾಂಗ್ಲಾದೇಶದ ಪ್ರಧಾನಿಯಾಗಿದ್ದರು.

ಮುಸ್ಲಿಮರ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗುವಂತಹ, ಬಂಗಬಂಧು ಶೇಖ್‌ ಮುಜಿಬರ್‌ ರಹಮಾನ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದರಿಂದ ಖಲೀದಾ ಜಿಯಾ ಅವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT