ಬಾಂಗ್ಲಾದಲ್ಲಿ ಶೇಖ್ ಹಸೀನಾ ಭರ್ಜರಿ ಜಯ

7

ಬಾಂಗ್ಲಾದಲ್ಲಿ ಶೇಖ್ ಹಸೀನಾ ಭರ್ಜರಿ ಜಯ

Published:
Updated:

ಢಾಕಾ: ನೆರೆಯ ಬಾಂಗ್ಲಾದೇಶದಲ್ಲಿ ಈಚೆಗೆ ನಡೆದ ಚುನಾವಣೆಯಲ್ಲಿ ಶೇಖ್ ಹಸೀನಾ ನೇತೃತ್ವದ ಆಡಳಿತಾರೂಢ ಅವಾಮಿ ಲೀಗ್ ಪಕ್ಷವು 288 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತಗಳಿಸಿದೆ. ಬಾಂಗ್ಲಾ ಸಂಸತ್ತಿನ ಒಟ್ಟು ಸದಸ್ಯ ಬಲ 300.

ಪ್ರಮುಖ ಪ್ರತಿಪಕ್ಷ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿ ಕೇವಲ 6 ಸ್ಥಾನಗಳಲ್ಲಿ ಮಾತ್ರವೇ ಜಯಗಳಿಸಿದೆ. ಆಡಳಿತಾರೂಢ ಪಕ್ಷ ಚುನಾವಣಾ ಅಕ್ರಮಗಳನ್ನು ನಡೆಸಿದೆ ಎಂದು ಪ್ರತಿಪಕ್ಷಗಳು ಗಂಭೀರ ಆರೋಪ ಮಾಡಿವೆ. ಚುನಾವಣೆ ಸಂದರ್ಭ ನಡೆದ ರಾಜಕೀಯ ಹಿಂಸಾಚಾರದಲ್ಲಿ ಒಟ್ಟು 17 ಮಂದಿ ಮೃತಪಟ್ಟಿದ್ದರು.

ಶೇಖ್ ಹಸೀನಾ ಪ್ರತಿಪಕ್ಷಗಳನ್ನು ಉಗ್ರವಾಗಿ ಹತ್ತಿಕ್ಕಿದ್ದಾರೆ. ಚುನಾವಣೆಗಳು ಮುಕ್ತ ಮತ್ತು ನ್ಯಾಯಸಮ್ಮತವಾಗಿ ನಡೆದಿಲ್ಲ. ಫಲಿತಾಂಶವನ್ನು ತಡೆಹಿಡಿದು ಶೀಘ್ರ ಮರು ಚುನಾವಣೆ ನಡೆಸಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸಿವೆ.

 

ಬರಹ ಇಷ್ಟವಾಯಿತೆ?

 • 3

  Happy
 • 2

  Amused
 • 1

  Sad
 • 0

  Frustrated
 • 0

  Angry

Comments:

0 comments

Write the first review for this !