ಮಂಗಳವಾರ, ಮಾರ್ಚ್ 31, 2020
19 °C

ಷರೀಫ್‌ ಗಡಿಪಾರಿಗಾಗಿ ಬ್ರಿಟನ್‌ ಸರ್ಕಾರಕ್ಕೆ ಪಾಕಿಸ್ತಾನ ಮನವಿ

ಪಿಟಿಐ Updated:

ಅಕ್ಷರ ಗಾತ್ರ : | |

ಲಾಹೋರ್‌: ತಲೆಮರೆಸಿಕೊಂಡಿರುವ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು ಗಡಿಪಾರು ಮಾಡುವಂತೆ ಪಾಕಿಸ್ತಾನವು ಬ್ರಿಟನ್‌ ಸರ್ಕಾರಕ್ಕೆ ಮನವಿ ಮಾಡಿದೆ. 

‘ಷರೀಫ್‌ ಅವರು ಜಾಮೀನಿನ ಷರತ್ತುಗಳನ್ನು ಉಲ್ಲಂಘಿಸಿ ತಲೆಮರೆಸಿಕೊಂಡಿದ್ದಾರೆ. ಹಾಗಾಗಿ ಅವರನ್ನು ಪಾಕಿಸ್ತಾನಕ್ಕೆ ಗಡಿಪಾರು ಮಾಡಬೇಕೆಂದು ಕೋರಿ ಈ ವಾರದಲ್ಲಿ ಬ್ರಿಟನ್‌ ಸರ್ಕಾರಕ್ಕೆ ಪತ್ರ ಬರೆಯಲಾಗುವುದು’ ಎಂದು ಪ್ರಧಾನಿಗಳ ವಿಶೇಷ ಸಹಾಯಕ(ಮಾಹಿತಿ) ಫಿರ್‌ದೋಸ್‌ ಆಶಿಕ್‌ ಅವಾನ್‌ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದರು.  

ನವಾಜ್‌ ಷರೀಫ್‌ ಕಳೆದ ನ.19ರಂದು ಚಿಕಿತ್ಸೆಗಾಗಿ ಲಂಡನ್‌ಗೆ ತೆರಳಿದ್ದರು. ಆದರೆ ಅಲ್ಲಿನ ಯಾವುದೇ ಆಸ್ಪತ್ರೆಯಲ್ಲಿ ದಾಖಲಾಗಿಲ್ಲ. ಚಿಕಿತ್ಸೆ ಹೆಸರಿನಲ್ಲಿ ಮುಂಚಿತವಾಗಿ ಯೋಜನೆ ರೂಪಿಸಿ ಷರೀಫ್‌ ಪರಾರಿಯಾಗಿದ್ದಾರೆ ಎಂದು ಅವರು ಆರೋಪಿಸಿದರು. 

ಚಿಕಿತ್ಸೆಗಾಗಿ ನಾಲ್ಕು ವಾರಗಳ ಅವಧಿಗೆ ವಿದೇಶಕ್ಕೆ ತೆರಳಲು ಲಾಹೋರ್‌ ಹೈಕೋರ್ಟ್ ನವಾಜ್‌ ಷರೀಫ್‌ ಅವರಿಗೆ ಕಳೆದ ಅಕ್ಟೋಬರ್‌ ತಿಂಗಳಲ್ಲಿ ಅನುಮತಿ ನೀಡಿತ್ತು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು