ಶುಕ್ರವಾರ, ನವೆಂಬರ್ 15, 2019
20 °C

ನೇಪಾಳ ಪ್ರವಾಹ: 28 ಸಾವು

Published:
Updated:
Prajavani

ಕಠ್ಮಂಡು: ನೇಪಾಳದಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಶನಿವಾರ 28ಕ್ಕೆ ಏರಿಕೆಯಾಗಿದೆ. 16ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ದೇಶದ ಹಲವೆಡೆ ಭೂಕುಸಿತದ ಅಪಾಯ ಎದುರಾಗಿದೆ. ಎಲ್ಲಾ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

‘‌ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ’ ಎಂದು ಗೃಹಸಚಿವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)