ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳದಲ್ಲಿ ಪ್ರವಾಹ: ಸಾವಿನ ಸಂಖ್ಯೆ 43ಕ್ಕೆ ಏರಿಕೆ

Last Updated 14 ಜುಲೈ 2019, 2:43 IST
ಅಕ್ಷರ ಗಾತ್ರ

ಕಠ್ಮಂಡು:ನೇಪಾಳದಲ್ಲಿ ಭಾರಿ ಮಳೆಯಿಂದ ಉಂಟಾದ ಪ್ರವಾಹದಲ್ಲಿ ಮೃತಪಟ್ಟವರ ಸಂಖ್ಯೆ ಭಾನುವಾರಕ್ಕೆ 43ಕ್ಕೆ ಏರಿಕೆಯಾಗಿದೆ. 24ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ದೇಶದ ಹಲವೆಡೆ ಭೂಕುಸಿತದ ಅಪಾಯ ಎದುರಾಗಿದೆ. ಎಲ್ಲಾ ಪ್ರಮುಖ ಹೆದ್ದಾರಿಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ.

‘‌ರಕ್ಷಣಾ ಕಾರ್ಯಾಚರಣೆ ತೀವ್ರಗೊಳಿಸಲಾಗಿದೆ’ ಎಂದು ಗೃಹಸಚಿವಾಲಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮುಳುಗಡೆ ಪ್ರದೇಶಗಳಲ್ಲಿ ವಾಸವಿರುವ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲಾಗಿದೆ. ನೂರಾರು ಗಂಜಿ ಕೇಂದ್ರಗಳನ್ನು ತೆರೆದು ಜನರಿಗೆ ಆಹಾರ ಮತ್ತು ಬಟ್ಟೆಯನ್ನು ವಿತರಣೆ ಮಾಡಲಾಗುತ್ತಿದೆ ಎಂದು ನೇಪಾಳ ಸರ್ಕಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT