ಗುರುವಾರ , ಡಿಸೆಂಬರ್ 5, 2019
19 °C
ಮಹಿಂದಾ ರಾಜಪಕ್ಸೆ ನೇಮಿಸಿ ಆದೇಶ

ಶ್ರೀಲಂಕಾ: ಅಧ್ಯಕ್ಷರ ಸಹೋದರ ನೂತನ ಪ್ರಧಾನಿ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಕೊಲಂಬೊ: ಶ್ರೀಲಂಕಾ ಅಧ್ಯಕ್ಷ ಗೋಟಬಯ ರಾಜಪಕ್ಸೆ ಅವರು ತಮ್ಮ ಹಿರಿಯ ಸಹೋದರ ಮಹಿಂದಾ ರಾಜಪಕ್ಸೆ ಅವರನ್ನು ಪ್ರಧಾನಿಯನ್ನಾಗಿ ಬುಧವಾರ ನೇಮಿಸಿದ್ದಾರೆ.

ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ ರನಿಲ್ ವಿಕ್ರಮಸಿಂಘೆ ಅವರು ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ಘೋಷಣೆ ಮಾಡಿದ್ದಾರೆ.

ಸದ್ಯ ಮಹಿಂದಾ ಅವರು ವಿರೋಧ ಪಕ್ಷದ ನಾಯಕರಾಗಿದ್ದಾರೆ. ಅಧ್ಯಕ್ಷೀಯ ಚುನಾವಣೆಯಲ್ಲಿ ಆಡಳಿತಾರೂಢ ಪಕ್ಷದ ಅಭ್ಯರ್ಥಿ ಸೋಲು ಅನುಭವಿಸಿದ ಬಳಿಕ ರನಿಲ್ ಅವರು ವಿರೋಧ ಪಕ್ಷಕ್ಕೆ ಅಧಿಕಾರ ಹಸ್ತಾಂತರಿಸುವ ನಿರ್ಧಾರಕ್ಕೆ ಬಂದಿದ್ದರು. ಗುರುವಾರ ರನಿಲ್ ಅವರು ರಾಜೀನಾಮೆ ನೀಡಲಿದ್ದಾರೆ. ಬಳಿಕ, ಮಹಿಂದಾ ಅವರು ಅಧಿಕಾರ ವಹಿಸಿಕೊಳ್ಳಲಿದ್ದಾರೆ.

2018ರ ಅಕ್ಟೋಬರ್ 26 ರಂದು ಮಹಿಂದಾ ಅವರನ್ನು ಪ್ರಧಾನಿಯನ್ನಾಗಿ ಅಂದಿನ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ನೇಮಿಸಿದ್ದರು. ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ ಈ ನೇಮಕ ಮಾಡಿದ್ದರು. ಇದರಿಂದ, ದೇಶದಲ್ಲಿ ಸಾಂವಿಧಾನಿಕ ಬಿಕ್ಕಟ್ಟು ಸೃಷ್ಟಿಯಾಗಿತ್ತು. ಸುಪ್ರೀಂ ಕೋರ್ಟ್‌ ತೀರ್ಪಿನ ಬಳಿಕ, ಅದೇ ವರ್ಷದ ಡಿಸೆಂಬರ್‌ನಲ್ಲಿ ಮಹಿಂದಾ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದರು. ಮಹಿಂದಾ ಅವರು ತಮ್ಮ  24ನೇ ವಯಸ್ಸಿನಲ್ಲಿಯೇ ಸಂಸತ್‌ಗೆ 1970ರಲ್ಲಿ ಆಯ್ಕೆಯಾಗಿದ್ದರು.

ಬಹುತಕ್ಕೆ ಗೌರವ: ‘ತಮ್ಮ ಸರ್ಕಾರಕ್ಕೆ ಸಂಸತ್ತಿನಲ್ಲಿ ಬಹುಮತವಿದ್ದರೂ ಅಧ್ಯಕ್ಷೀಯ ಚುನಾವಣೆಯಲ್ಲಿ ರಾಜಪಕ್ಸೆ ಅವರು ಆಯ್ಕೆಯಾಗಿರುವುದನ್ನು ಗೌರವಿಸಿ ರಾಜೀನಾಮೆ ನೀಡುತ್ತಿದ್ದೇನೆ’ ಎಂದು ರನಿಲ್‌ ವಿಕ್ರಮಸಿಂಘೆ ತಿಳಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು