ಶುಕ್ರವಾರ, ನವೆಂಬರ್ 15, 2019
27 °C

ನ.11ರವರೆಗೆ ನೀರವ್‌ ಮೋದಿಗೆ ನ್ಯಾಯಾಂಗ ಬಂಧನ

Published:
Updated:
Prajavani

ಲಂಡನ್: ಭಾರತದಿಂದ ಪರಾರಿಯಾಗಿರುವ ವಜ್ರದ ವ್ಯಾಪಾರಿ ನೀರವ್‌ ಮೋದಿಯ ನ್ಯಾಯಾಂಗ ಬಂಧನವನ್ನು ನವೆಂಬರ್‌ 11ರ ವರೆಗೆ ವಿಸ್ತರಿಸಿ ಇಲ್ಲಿನ ನ್ಯಾಯಾಲಯ ಆದೇಶ ನೀಡಿದೆ.

ಪಂಜಾಬ್‌ ನ್ಯಾಷನಲ್‌ ಬ್ಯಾಂಕ್‌ಗೆ ₹13 ಸಾವಿರ ಕೋಟಿ ವಂಚಿಸಿದ ಆರೋಪ ನೀರವ್‌ ಮೇಲಿದೆ.

ಲಂಡನ್‌ನ ಜೈಲಿನಿಂದ ವಿಡಿಯೊ ಕಾನ್ಫರೆನ್ಸ್ ಮೂಲಕ ವೆಸ್ಟ್‌ ಮಿನಿಸ್ಟರ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ಕಲಾಪಕ್ಕೆ ನೀರವ್‌ ಗುರುವಾರ ಹಾಜರಾಗಿದ್ದರು.

ನೀರವ್‌ ಹಸ್ತಾಂತರ ಪ್ರಕರಣದ ವಿಚಾರಣೆಯನ್ನು ಮುಂದಿನ ವರ್ಷದ ಮೇ11 ಮತ್ತು 15ರ ನಡುವೆ ನಡೆಸಲಾಗುವುದು ಎಂದು ನ್ಯಾಯಾಧೀಶರು ತಿಳಿಸಿದ್ದಾರೆ.

ಪ್ರತಿ 28 ದಿನಗಳಿಗೊಮ್ಮೆ ವಿಡಿಯೊ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಬೇಕು ಎಂದೂ ನ್ಯಾಯಾಧೀಶರು ಸೂಚಿಸಿದ್ದಾರೆ.

ಬಂಧನದ ಬಳಿಕ ನೀರವ್‌ ಸಲ್ಲಿಸಿದ್ದ ನಾಲ್ಕು ಜಾಮೀನು ಅರ್ಜಿಗಳನ್ನು ನ್ಯಾಯಾಲಯ ವಜಾಗೊಳಿಸಿತ್ತು.

ಪ್ರತಿಕ್ರಿಯಿಸಿ (+)