ಬುಧವಾರ, ಅಕ್ಟೋಬರ್ 23, 2019
27 °C

ಕರ್ತಾರಪುರ ಕಾರಿಡಾರ್‌ ನಿಗದಿಯಾಗದ ಉದ್ಘಾಟನಾ ದಿನಾಂಕ

Published:
Updated:

ಇಸ್ಲಾಮಾಬಾದ್‌: ಸಿಖ್ ಧರ್ಮ ಸಂಸ್ಥಾಪಕ ಗುರುನಾನಕ್ ದೇವ್‌ ಅವರ 550ನೇ ಜನ್ಮ ದಿನದ ಒಳಗೆ ಕರ್ತಾರಪುರ ಕಾರಿಡಾರ್‌ ಸಂಚಾರಕ್ಕೆ ಮುಕ್ತವಾಗಲಿದೆ ಎಂದು ಭರವಸೆ ನೀಡಿದ್ದರೂ ಉದ್ಘಾಟನೆಗೆ ಇನ್ನೂ ದಿನಾಂಕ ನಿಗದಿಯಾಗಿಲ್ಲ ಎಂದು ಪಾಕಿಸ್ತಾನ ಗುರುವಾರ ಹೇಳಿದೆ.

ನವೆಂಬರ್ 9ರಿಂದ ಕರ್ತಾರಪುರ ಸಾಹಿಬ್‌ಗೆ ಭೇಟಿ ನೀಡಲು ಭಾರತೀಯ ಸಿಖ್ ಯಾತ್ರಾರ್ಥಿಗಳಿಗೆ ಪಾಕಿಸ್ತಾನ ಅವಕಾಶ ನೀಡಲಿದೆ ಎಂದು ಯೋಜನೆಯ ಮುಖ್ಯಸ್ಥರಾಗಿದ್ದ ಹಿರಿಯ ಅಧಿಕಾರಿಯೊಬ್ಬರು ಘೋಷಿಸಿದ ಒಂದು ತಿಂಗಳ ನಂತರ ಈ ಹೇಳಿಕೆ ಹೊರಬಿದ್ದಿದೆ.

ಈ ಕುರಿತು ಮಾತನಾಡಿರುವ ಪಾಕಿಸ್ತಾನದ ವಿದೇಶಾಂಗ ಇಲಾಖೆ ವಕ್ತಾರ ಮೊಹಮ್ಮದ್‌ ಫೈಸಲ್‌, ಕರ್ತಾರಪುರ ಕಾರಿಡಾರ್ ಯೋಜನೆಯ ಕಾಮಗಾರಿಯನ್ನು ಸರಿಯಾದ ಸಮಯಕ್ಕೆ ಪೂರ್ಣಗೊಳಿಸುವುದಾಗಿ ಪ್ರಧಾನಿ ಇಮ್ರಾನ್‌ ಖಾನ್‌ ಭರವಸೆ ನೀಡಿದ್ದಾರೆ.

ಇದನ್ನೂ ಓದಿ... ಕರ್ತಾರಪುರ ಕಾರಿಡಾರ್‌: ಒಮ್ಮತ ಮೂಡದೆ ನಿರ್ಮಾಣಕ್ಕೆ ಅಡ್ಡಿ

ಚುನಾವಣಾ ಫಲಿತಾಂಶ 2019 | ಹರಿಯಾಣ ಮತ್ತು ಮಹಾರಾಷ್ಟ್ರ ವಿಧಾನಸಭೆ 2019 ಚುನಾವಣೆಗೆ ಸಂಬಂಧಿಸಿದ ಸಮಗ್ರ ಸುದ್ದಿ, ಮಾಹಿತಿ, ವಿಶ್ಲೇಷಣೆ ಇಲ್ಲಿ ಲಭ್ಯ.

ಮಹಾರಾಷ್ಟ್ರ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಹರಿಯಾಣ ವಿಧಾನಸಭೆಯ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರತಿಕ್ರಿಯಿಸಿ (+)