ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೇಪಾಳ: ದಲೈಲಾಮಾ ಜನ್ಮ ದಿನಾಚರಣೆಗೆ ಅನುಮತಿ ಇಲ್ಲ

Last Updated 24 ನವೆಂಬರ್ 2019, 19:57 IST
ಅಕ್ಷರ ಗಾತ್ರ

ಕಠ್ಮಂಡು: ಟಿಬೆಟಿಯನ್ನರ ಧರ್ಮಗುರು ದಲೈಲಾಮಾ ಅವರ ಜನ್ಮ ದಿನಾಚರಣೆಗೆ ನೇಪಾಳ ಸರ್ಕಾರ ಅನುಮತಿ ನಿರಾಕರಿಸಿದೆ.

ನೇಪಾಳದ ಮೇಲೆ ಚೀನಾದ ಪ್ರಭಾವ ಬೀರುತ್ತಿರುವುದಕ್ಕೆ ಇದು ಸಾಕ್ಷಿಯಾಗಿದೆ. ಚೀನಾ ಒತ್ತಡ ಹೇರುತ್ತಿರುವುದರಿಂದ ಟಿಬೆಟಿಯನ್ನರ ಚಟುವಟಿಕೆಗಳಿಗೆ ನಿಯಂತ್ರಣ ಹೇರಲಾಗುತ್ತಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

‘ಶಾಂತಿ ಮತ್ತು ಭದ್ರತೆ ಸಮಸ್ಯೆಯಾಗುವುದರಿಂದ ಅನುಮತಿ ನಿರಾಕರಿಸಲಾಗಿದೆ. ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಲಾಗಿದೆ’ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸರ್ಕಾರ ಅನುಮತಿ ನಿರಾಕರಿಸಿರುವುದರಿಂದ ಮನೆಗಳಲ್ಲಿ ಟಿಬೆಟಿಯನ್ನರು ಜನ್ಮ ದಿನ ಆಚರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT