ಮಂಗಳವಾರ, ಸೆಪ್ಟೆಂಬರ್ 28, 2021
22 °C
ಮಾಜಿ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಹೇಳಿಕೆ ಬೆನ್ನಲ್ಲೇ ಸ್ಪಷ್ಟನೆ

ರಫೇಲ್ ಒಪ್ಪಂದ: ಭಾರತೀಯ ಕಂಪೆನಿ ಆಯ್ಕೆಯಲ್ಲಿ ನಮ್ಮ ಪಾತ್ರವಿಲ್ಲ ಎಂದ ಫ್ರಾನ್ಸ್

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಫೇಲ್‌ ಯುದ್ಧವಿಮಾನ ಖರೀದಿ ಒಪ್ಪಂದಕ್ಕೆ ಸಂಬಂಧಿಸಿ ಭಾರತೀಯ ಕಂಪೆನಿಯ ಆಯ್ಕೆಯಲ್ಲಿ ನಮ್ಮ ಪಾತ್ರವಿಲ್ಲ ಎಂದು ಫ್ರಾನ್ಸ್‌ ಸರ್ಕಾರ ಹೇಳಿದೆ.

ಡಸಾಲ್ಟ್‌ ಕಂಪೆನಿ ಜತೆಗೆ ರಫೇಲ್‌ ಯುದ್ಧ ವಿಮಾನ ಖರೀದಿಸಲು ಮಾಡಿಕೊಂಡ ಒಪ್ಪಂದದಲ್ಲಿ ಅನಿಲ್‌ ಅಂಬಾನಿ ಮಾಲೀಕತ್ವದ ರಿಲಯನ್ಸ್‌ ಡಿಫೆನ್ಸ್‌ ಕಂಪನಿಯನ್ನೇ ದೇಶೀ ಪಾಲುದಾರನಾಗಿ ಸೇರಿಸಿಕೊಳ್ಳಬೇಕು ಎಂದು ಭಾರತ ಸರ್ಕಾರ ಹೇಳಿತ್ತು ಎಂದು ಫ್ರಾನ್ಸ್‌ನ ಮಾಜಿ ಅಧ್ಯಕ್ಷ ಫ್ರಾಂಸ್ವಾ ಒಲಾಂಡ್‌ ಶುಕ್ರವಾರ ಹೇಳಿದ್ದರು. ಈ ವಿಚಾರ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿರುವ ಬೆನ್ನಲ್ಲೇ ಫ್ರಾನ್ಸ್‌ ಸರ್ಕಾರ ಸ್ಪಷ್ಟನೆ ನೀಡಿದೆ.

ಇದನ್ನೂ ಓದಿ: ರಫೇಲ್ ಹಗರಣದಲ್ಲಿ ಅಂಬಾನಿ ಪರ ಮೋದಿ ಲಾಬಿ: ಫ್ರಾನ್ಸ್ ಮಾಜಿ ಅಧ್ಯಕ್ಷ ಒಲಾಂಡ್

‘ಒಪ್ಪಂದದಲ್ಲಿ ಫ್ರಾನ್ಸ್ ಕಂಪೆನಿಗಳ ಜತೆ ಭಾರತದ ಯಾವ ಕಂಪೆನಿ ಸಹಭಾಗಿತ್ವ ವಹಿಸಿಕೊಳ್ಳಬೇಕು ಎಂಬುದನ್ನು ನಿರ್ಧರಿಸುವ ವಿಷಯದಲ್ಲಿ ಫ್ರಾನ್ಸ್‌ ಸರ್ಕಾರ ಭಾಗಿಯಾಗಿಲ್ಲ. ಭಾರತದ ಸ್ವಾಧೀನ ಪ್ರಕ್ರಿಯೆಯ ಪ್ರಕಾರ ಅಲ್ಲಿನ ಯಾವುದೇ ಕಂಪೆನಿಯನ್ನು ಆಯ್ಕೆ ಮಾಡಿಕೊಳ್ಳಲು ಫ್ರಾನ್ಸ್ ಕಂಪೆನಿಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ. ಫ್ರಾನ್ಸ್‌ನ ಕಂಪೆನಿಗಳು ಈ ಹಿಂದೆಯೂ ತಮ್ಮ ಅವಶ್ಯಕತೆಗೆ ತಕ್ಕಂತೆ ಭಾರತದ ನಿಯಮಗಳ ಪ್ರಕಾರ ಅಲ್ಲಿನ ಕಂಪೆನಿಗಳ ಜತೆ ಒಪ್ಪಂದ ಮಾಡಿಕೊಂಡಿವೆ. ಅದರಲ್ಲಿ ಸರ್ಕಾರಿ, ಸರ್ಕಾರಿ–ಖಾಸಗಿ ಸಹಭಾಗಿತ್ವದ ಕಂಪೆನಿಗಳೂ ಸೇರಿವೆ’ ಎಂಬ ಫ್ರಾನ್ಸ್‌ ವಿದೇಶಾಂಗ ಸಚಿವಾಲಯದ ವಕ್ತಾರರ ಹೇಳಿಕೆ ಒಳಗೊಂಡ ಪ್ರಕಟಣೆಯನ್ನು ದೆಹಲಿಯಲ್ಲಿರುವ ಫ್ರಾನ್ಸ್‌ ರಾಯಭಾರ ಕಚೇರಿ ಬಿಡುಗಡೆ ಮಾಡಿದೆ.

ಈ ಮಧ್ಯೆ, ‘ಭಾರತದಲ್ಲೇ ತಯಾರಿಸಿ (ಮೇಕ್‌ ಇನ್ ಇಂಡಿಯಾ)’ ಯೋಜನೆ ಅಡಿ ‘ರಿಲಯನ್ಸ್‌ ಡಿಫೆನ್ಸ್’ ಕಂಪೆನಿಯನ್ನು ಸಹಭಾಗಿತ್ವಕ್ಕೆ ಆಯ್ಕೆ ಮಾಡಿಕೊಂಡಿರುವುದಾಗಿ ಡಸಾಲ್ಟ್‌ ಕಂಪೆನಿ ಹೇಳಿಕೆ ಬಿಡುಗಡೆ ಮಾಡಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು