ಗುರುವಾರ , ಜುಲೈ 29, 2021
20 °C

ಕಾಬೂಲ್‌: ಮಸೀದಿಯಲ್ಲಿ ಬಾಂಬ್‌ ಸ್ಫೋಟ, ನಾಲ್ವರು ಸಾವು

ಎಪಿ Updated:

ಅಕ್ಷರ ಗಾತ್ರ : | |

ಕಾಬೂಲ್‌: ಇಲ್ಲಿನ ಮಸೀದಿಯೊಂದರಲ್ಲಿ ಶುಕ್ರವಾರ ಬಾಂಬ್‌ ಸ್ಪೋಟಿಸಿದ್ದು, ನಾಲ್ಕು ಮಂದಿ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದರು.

ಮಸೀದಿಯೊಳಗೆ ಬಾಂಬ್‌ ಅನ್ನು ಇರಿಸಲಾಗಿತ್ತು. ಯಾವುದೇ ಭಯೋತ್ಪಾದನಾ ಸಂಘಟನೆ ಈ ದಾಳಿಯ ಹೊಣೆ ಹೊತ್ತಿಲ್ಲ. ದಾಳಿಯಲ್ಲಿ ಪ್ರಾರ್ಥನಾ ನಾಯಕ ಮುಫ್ಲೆಹ್‌ ಪ್ರೊತಾನ್‌ ಸೇರಿದಂತೆ ನಾಲ್ಕು ಮಂದಿ ಸಾವನ್ನಪ್ಪಿದ್ದಾರೆ. ಇನ್ನೂ ಘಟನಾ ಸ್ಥಳಾಂತರದಿಂದ ಸಿಲುಕಿದ್ದವರನ್ನು ರಕ್ಷಿಸಲಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಂತರಿಕ ಸಚಿವಾಲಯದ ವಕ್ತಾರ ತಾರಿಕ್ ಅರಿಯನ್ ತಿಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು