ಗುರುವಾರ , ಏಪ್ರಿಲ್ 9, 2020
19 °C

ಒಮನ್ ಏರ್ ವೇಸ್ ಅಧಿಕಾರಿಗೆ ಕೊರೊನಾ ಸೋಂಕು: ಎಲ್ಲಾ ಸಿಬ್ಬಂದಿಗೆ ಚಿಕಿತ್ಸೆಗೆ ಆದೇಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಸ್ಕತ್: ಒಮನ್ ಅಂತರರಾಷ್ಟ್ರೀಯ ವಿಮಾನ ಸಂಸ್ಥೆ ಅಧಿಕಾರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿರುವುದರಿಂದ ಈ ವ್ಯಕ್ತಿಯೊಂದಿಗೆ ವ್ಯವಹರಿಸಿದ್ದ ತನ್ನ ಎಲ್ಲಾ ಸಿಬ್ಬಂದಿಗೆ ಪ್ರತ್ಯೇಕ ಕೊಠಡಿಯಲ್ಲಿರಿಸಿ ಚಿಕಿತ್ಸೆ ನೀಡಲು ಸಂಸ್ಥೆ ಆದೇಶಿಸಿದೆ.

ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಾರ್ಕ್ ಬ್ರೀನ್ ತೀವ್ರ ಶೀತದಿಂದ ಬಳಲುತ್ತಿದ್ದರು. ಕೂಡಲೆ ಅವರನ್ನು ತಪಾಸಣೆಗೆ ಒಳಪಡಿಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ವಿಷಯ ತಿಳಿದ ಕೂಡಲೆ ಸಂಸ್ಥೆಯು ಅಧಿಕಾರಿ ಜೊತೆ ವ್ಯವಹರಿಸಿದ್ದ ಎಲ್ಲಾ ಸಿಬ್ಬಂದಿಗೆ 14 ದಿನಗಳವರೆಗೆ ಪ್ರತ್ಯೇಕ ಕೊಠಡಿಯಲ್ಲಿ ಇರಿಸಿ ಚಿಕಿತ್ಸೆ ನೀಡಲು ಆದೇಶ ನೀಡಿದೆ.

ಇದರಿಂದಾಗಿ ಸಂಸ್ಥೆಯ ವಿಮಾನದಲ್ಲಿ ಪ್ರಯಾಣಿಸುವ ಎಲ್ಲಾ ಸಿಬ್ಬಂದಿಯ ಆರೋಗ್ಯದ ಹಿತದೃಷ್ಟಿಯಿಂದ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಂಡಿರುವುದಾಗಿ ತಿಳಿಸಿದೆ. ವಿಮಾನದಲ್ಲಿ ಸಂಚರಿಸುವ ಎಲ್ಲಾ ದೇಶಗಳ ಪ್ರಜೆಗಳಿಗೂ ಸುರಕ್ಷತೆಯ ಕುರಿತು ಮಾಹಿತಿ ನೀಡಲಾಗುತ್ತಿದೆ ಎಂದಿರುವುದಾಗಿ ಎಎನ್ ಐ ಸಂಸ್ಥೆ ತಿಳಿಸಿದೆ.

ಒಮನ್ ಏರ್ ಮಸ್ಕಟ್‌‌ನಲ್ಲಿ ಕಚೇರಿ ಹೊಂದಿದ್ದು, ಈ ಸಂಸ್ಥೆ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ವಿಮಾನಯಾನ ಸೇವೆ ಒದಗಿಸುತ್ತಿದೆ.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು