ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾರತ ದಾಳಿ ಮಾಡಿದರೆ ತಕ್ಕ ಉತ್ತರ ನೀಡುತ್ತೇವೆ: ಸೇನೆಯ ವಕ್ತಾರ ಆಸಿಫ್‌ ಗಫೂರ್‌

Last Updated 30 ಜನವರಿ 2020, 20:00 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ‘ಭಾರತವು ದಾಳಿ ಮಾಡಿದರೆ ಪಾಕ್‌ ಸೇನೆಯು ತಕ್ಕ ಉತ್ತರವನ್ನು ನೀಡಲಿದೆ’ ಎಂದು ಸೇನೆಯ ವಕ್ತಾರ ಮೇಜರ್‌ ಜನರಲ್‌ ಆಸಿಫ್‌ ಗಫೂರ್‌ ಹೇಳಿದ್ದಾರೆ.

ಪ್ರಧಾನಿನರೇಂದ್ರ ಮೋದಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ‘ಭಾರತವು ಯುದ್ಧವನ್ನು ಆರಂಭಿಸಿದರೆ, ನಾವು ಕೊನೆಗೊಳಿಸುತ್ತೇವೆ’ ಎಂದು ತಿಳಿಸಿದ್ದಾರೆ.

‘ಕಳೆದ ಎರಡು ದಶಕಗಳಿಂದ ನಾವು ಭಯೋತ್ಪಾದಕರ ವಿರುದ್ಧ ಹೋರಾಡುತ್ತಿದ್ದೇವೆ. ನಮಗೆ ಯಾವ ಸಂದರ್ಭದಲ್ಲಿ ಹೇಗೆ ಉತ್ತರ ನೀಡಬೇಕೆಂದು ಗೊತ್ತಿದೆ. 2019ರಲ್ಲೇ ಯುದ್ಧವಾಗಬೇಕಿತ್ತು. ಆದರೆ, ಸರಿಯಾದ ಸಮಯದಲ್ಲಿ ಉತ್ತರ ನೀಡುವುದಕ್ಕಾಗಿ ಶಾಂತಿಯಿಂದ ಇದ್ದೆವು’ ಎಂದು ಹೇಳಿದ್ದಾರೆ.

ನವದೆಹಲಿಯಲ್ಲಿ ಇತ್ತೀಚೆಗೆ ಮೋದಿ ಅವರುಎನ್‌ಸಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ‘ನಮ್ಮ ಸೇನೆ 10 ದಿನಗಳಲ್ಲಿ ಪಾಕಿಸ್ತಾನವನ್ನು ಮಣಿಸಲಿದೆ’ ಎಂದು ಹೇಳಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT