ಬುಧವಾರ, ಫೆಬ್ರವರಿ 19, 2020
28 °C

ಹಫೀಜ್ ಪ್ರಕರಣದ ತೀರ್ಪು ಮುಂದೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ಲಾಹೋರ್: ಮುಂಬೈ ದಾಳಿ ಸಂಚುಕೋರ ಹಫೀಜ್ ಸಯೀದ್‌ ವಿರುದ್ಧದ ಭಯೋತ್ಪಾದಕ ಕೃತ್ಯಗಳಿಗೆ ಆರ್ಥಿಕ ನೆರವು ನೀಡಿದ ಪ್ರಕರಣದ ತೀರ್ಪನ್ನು ಇಲ್ಲಿನ ಭಯೋತ್ಪಾದನಾ ನಿಗ್ರಹ ನ್ಯಾಯಾಲಯ (ಎಟಿಸಿ) ಮುಂಗಳವಾರಕ್ಕೆ ಮುಂದೂಡಿದೆ.

ಲಾಹೋರ್ ಎಟಿಸಿ ನ್ಯಾಯಾಧೀಶ ಅರ್ಷದ್ ಹುಸೇನ್ ಭುಟ್ಟಾ ಅವರು ಪ್ರಕರಣದ ತೀರ್ಪನ್ನು ಶನಿವಾರ ಪ್ರಕಟಿಸುವುದಾಗಿ ಕಳೆದ ವಾರ ಘೋಷಿಸಿದ್ದರು.

‘ಭಯೋತ್ಪಾದಕ ಚಟುವಟಿಕೆಗಳಿಗೆ ಆರ್ಥಿಕ ನೆರವು ನೀಡಿದ ಆರೋಪ ಸಂಬಂಧ ಎಲ್ಲಾ ಪ್ರಕರಣಗಳ ತೀರ್ಪನ್ನು ಒಟ್ಟಿಗೇ ಪ್ರಕಟಿಸಬೇ
ಕೆಂದು ಸಯೀದ್ ಮನವಿ ಸಲ್ಲಿಸಿದ್ದರು. ಶನಿವಾರ ಈ ಅರ್ಜಿ ವಿಚಾರಣೆ ನಡೆಸಿ, ನ್ಯಾಯಾಧೀಶರು ತೀರ್ಪು ಮುಂದೂಡಿದ್ದಾರೆ’ ಎಂದು ನ್ಯಾಯಾಲಯದ ಅಧಿಕಾರಿಯೊಬ್ಬರು ತಿಳಿಸಿದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು