ಗುರುವಾರ , ಆಗಸ್ಟ್ 5, 2021
23 °C

ಮುಂಬೈ ದಾಳಿ ಕೈವಾಡ: ಅಮೆರಿಕದಲ್ಲಿ ತಹಾವ್ವುರ್ ರಾಣಾ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ವಾಷಿಂಗ್ಟನ್: 2008ರ ಮುಂಬೈ ದಾಳಿಯಲ್ಲಿ ಕೈವಾಡವಿರುವ ಪಾಕಿಸ್ತಾನ ಮೂಲದ ಕೆನಡಾದ ಉದ್ಯಮಿ ತಹಾವ್ವುರ್ ರಾಣಾನನ್ನು ಭಾರತದ ಹಸ್ತಾಂತರ ಬೇಡಿಕೆ ಅನ್ವಯ ಲಾಸ್ ಏಂಜಲೀಸ್‌ನಲ್ಲಿ ಪೊಲೀಸರು ಪುನಃ ಬಂಧಿಸಿದ್ದಾರೆ. ಮುಂಬೈ ದಾಳಿಯಲ್ಲಿ 166 ಮಂದಿ ಮೃತಪಟ್ಟಿದ್ದರು.

ತನಗೆ ಕೋವಿಡ್–19 ದೃಢಪಟ್ಟಿದೆ ಎಂದು ರಾಣಾ ತಿಳಿಸಿದ್ದರಿಂದ, ಸಹಾನುಭೂತಿ ನೆಲೆಯಲ್ಲಿ ಆತನನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿತ್ತು.

ಘೋಷಿತ ಅಪರಾಧಿ ರಾಣಾನನ್ನು ವಶಕ್ಕೆ ನೀಡುವಂತೆ ಭಾರತ ಬೇಡಿಕೆ ಇಟ್ಟಿದ್ದರಿಂದ ಆತನನ್ನು ಮರಳಿ ವಶಕ್ಕೆ ಪಡೆಯಲಾಗಿದೆ. ಜೂನ್ 22ರೊಳಗೆ ಅರ್ಜಿ ಸಲ್ಲಿಸುವಂತೆ ರಾಣಾ ಪರ ವಕೀಲರಿಗೆ ಸೂಚಿಸಲಾಗಿದೆ. 26ರ ಒಳಗಾಗಿ ಪ್ರತಿಕ್ರಿಯೆ ಸಲ್ಲಿಸಲು ಸರ್ಕಾರಕ್ಕೆ ಸೂಚಿಸಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು