ಬುಧವಾರ, ಜುಲೈ 28, 2021
29 °C
ಹೈ ಕಮಿಷನ್‌ನ ಅಧಿಕಾರಿಗಳನ್ನು ಅಪಹರಿಸಿ ದೌರ್ಜನ್ಯ

ಹೈ ಕಮಿಷನ್‌ನ ಅಧಿಕಾರಿಗಳನ್ನು ಅಪಹರಿಸಿ ದೌರ್ಜನ್ಯ: ಭಾರತದ ಆರೋಪ ಅಲ್ಲಗಳೆದ ಪಾಕ್‌

ಪಿಟಿಐ Updated:

ಅಕ್ಷರ ಗಾತ್ರ : | |

Pak flag

ಇಸ್ಲಾಮಾಬಾದ್‌: ಇಲ್ಲಿರುವ ಭಾರತದ ಹೈಕಮಿಷನ್‌ನ ಇಬ್ಬರು ಅಧಿಕಾರಿಗಳನ್ನು ಅಪಹರಿಸಿ ಅವರ ಮೇಲೆ ದೌರ್ಜನ್ಯ ಎಸಗಲಾಗಿದೆ ಎಂಬ ಭಾರತದ ಆರೋಪ ಆಧಾರರಹಿತ ಎಂದು ಪಾಕಿಸ್ತಾನ ಬುಧವಾರ ಹೇಳಿದೆ.

ಅಪಘಾತ ನಡೆಸಿ ಪರಾರಿಯಾದ ಕಾರಣಕ್ಕೆ ಅವರನ್ನು ಬಂಧಿಸಲಾಗಿತ್ತು ಎಂದು ಪಾಕಿಸ್ತಾನ ಹೇಳಿಕೊಂಡಿದೆ.

ಆದರೆ ಅವರಿಗೆ ರಾಜತಾಂತ್ರಿಕ ರಕ್ಷಣೆ ಇದೆ ಎಂಬ ಮಾಹಿತಿಯನ್ನು ಭಾರತ ನೀಡಿ ಈ ಕ್ರಮ ಪ್ರತಿಭಟಿಸಿದ ಬಳಿಕ ಅವರನ್ನು ಬಿಡುಗಡೆ ಮಾಡಲಾಗಿತ್ತು.

ಹೈ ಕಮಿಷನ್‌ನ ಇಬ್ಬರು ಅಧಿಕಾರಿಗಳನ್ನು ಅಪಹರಿಸಿ ದೌರ್ಜನ್ಯ ಎಸಗಿದ ಬಗ್ಗೆ ಭಾರತ ಮಂಗಳವಾರ ಪಾಕಿಸ್ತಾನದ ಹೈಕಮಿಷನ್‌ ಕಚೇರಿಯ ಹೈದರ್‌ ಷಾ ಅವರಿಗೆ ಕರೆ ಕಳುಹಿಸಿ ಪ್ರತಿಭಟನೆ ದಾಖಲಿಸಿತ್ತು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು