ಗುರುವಾರ , ಫೆಬ್ರವರಿ 27, 2020
19 °C

ಕದನ ವಿರಾಮ ಉಲ್ಲಂಘನೆ ಆರೋಪ: ಪ್ರತಿಭಟನೆ ದಾಖಲಿಸಿದ ಪಾಕಿಸ್ತಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಇಸ್ಲಾಮಾಬಾದ್: ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತೀಯ ಪಡೆಗಳು ಕದನ ವಿರಾಮ ಉಲ್ಲಂಘಿಸಿವೆ ಎಂದು ಆರೋಪಿಸಿರುವ ಪಾಕಿಸ್ತಾನ ಶುಕ್ರವಾರ ಭಾರತೀಯ ರಾಯಭಾರಿಯನ್ನು ಕರೆಸಿ, ಪ್ರತಿಭಟನೆ ದಾಖಲಿಸಿದೆ.

ವಿದೇಶಾಂಗ ಕಚೇರಿಗೆ ಭಾರತೀಯ ಡೆಪ್ಯುಟಿ ಹೈ ಕಮಿಷನರ್ ಗೌರವ್ ಅಹ್ಲುವಾಲಿಯಾ ಅವರನ್ನು ಕರೆಸಿದ ಪಾಕ್, ಲಿಪಾ ಮತ್ತು ಬತ್ತಾಲ್ ಸೆಕ್ಟರ್‌ಗಳಲ್ಲಿ ನಡೆದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಇಬ್ಬರು ನಾಗರಿಕರು ಮತ್ತು ಒಬ್ಬ ರಕ್ಷಣಾ ಸಿಬ್ಬಂದಿ ಮೃತರಾಗಿರುವ ಕುರಿತು ಭಾರತಕ್ಕೆ ಮಾಹಿತಿ ನೀಡಿದೆ. ಬಳಿಕ ಪ್ರತಿಭಟನೆ ದಾಖಲಿಸಿದೆ.

ಭಾರತೀಯ ಪಡೆಗಳು ಕದನ ವಿರಾಮವನ್ನು ಗೌರವಿಸುವಂತೆ ಭಾರತ ಸೂಚನೆ ನೀಡಬೇಕೆಂದು ವಿದೇಶಾಂಗ ಕಚೇರಿಯ ವಕ್ತಾರ ಮಹಮ್ಮದ್ ಫೈಸಲ್ ಒತ್ತಾಯಿಸಿದ್ದಾರೆ.

ವಿಶ್ವಸಂಸ್ಥೆಯ ರಕ್ಷಣಾ ಕೌನ್ಸಿಲ್‌ ನಿರ್ಣಯಗಳ ಪ್ರಕಾರ ಭಾರತವು, ಪಾಕಿಸ್ತಾನ ಮತ್ತು ಭಾರತದಲ್ಲಿ ವಿಶ್ವಸಂಸ್ಥೆಯ ಮಿಲಿಟರಿ ವೀಕ್ಷಕ ಗುಂಪುಗಳಿಗೆ ಅನುಮತಿ ನೀಡಬೇಕು ಎಂದು ಫೈಸಲ್ ಹೇಳಿದ್ದಾರೆ.

ಭಾರತದ ಕದನವಿರಾಮ ಉಲ್ಲಂಘನೆಯು ಪ್ರಾದೇಶಿಕ ಶಾಂತಿ ಮತ್ತು ರಕ್ಷಣೆಗೆ ಬೆದರಿಕೆಯುಂಟು ಮಾಡಿದೆ ಎಂದು ಪಾಕ್ ವಿದೇಶಾಂಗ ಕಚೇರಿಯ ವಕ್ತಾರರು ತಿಳಿಸಿದ್ದಾರೆ.

ಶುಕ್ರವಾರ ಬತ್ತಾಲ್ ಪಟ್ಟಣದಲ್ಲಿ ಭಾರತೀಯ ಪಡೆಗಳು ನಡೆಸಿದ ದಾಳಿಯಲ್ಲಿ ಪಾಕ್‌ನ ಒಬ್ಬ ಸೈನಿಕ ಸಾವಿಗೀಡಾಗಿದ್ದು, ಭಾರತೀಯ ಪಡೆಗಳ ದಾಳಿಗೆ ಇದುವರೆಗೆ ಒಟ್ಟು ಆರು ಮಂದಿ ಬಲಿಯಾಗಿದ್ದಾರೆ ಎಂದು ಪಾಕಿಸ್ತಾನದ ಮಿಲಿಟರಿ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು