ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕದನ ವಿರಾಮ ಉಲ್ಲಂಘನೆ ಆರೋಪ: ಭಾರತದ ರಾಯಭಾರಿಗೆ ಪಾಕ್‌ ಸಮನ್ಸ್‌

Last Updated 5 ಮೇ 2020, 11:53 IST
ಅಕ್ಷರ ಗಾತ್ರ

ಇಸ್ಲಾಮಾಬಾದ್‌: ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ)ಅಪ್ರಚೋದಿತ ಗುಂಡಿನ ದಾಳಿ ನಡೆಸಲಾಗುತ್ತಿದೆ ಎಂದು ಆರೋಪಿಸಿರುವ ಪಾಕಿಸ್ತಾನವು ಭಾರತದ ಹಿರಿಯ ರಾಯಭಾರಿ ಅಧಿಕಾರಿಯನ್ನು ಕರೆಯಿಸಿ ಪ್ರತಿಭಟನೆ ದಾಖಲಿಸಿದೆ.

ಸೋಮವಾರ ಭಾರತೀಯ ಪಡೆಗಳು ಬಾಗ್ಸರ್‌ ವಲಯಗಳಲ್ಲಿ ಕದನ ವಿರಾಮ ಉಲ್ಲಂಘಿಸಿದ್ದು, ಇದರಿಂದ ಆರು ನಾಗರಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪಾಕ್‌ ವಿದೇಶಾಂಗ ಕಚೇರಿ ತಿಳಿಸಿದೆ.

‘ಪಾಕ್‌ ನಾಗರಿಕರನ್ನು ಗುರಿಯಾಗಿಸಿಕೊಂಡು ಭಾರತನಿರಂತರವಾಗಿ ದಾಳಿ ನಡೆಸುತ್ತಿದ್ದು,ಈ ವರ್ಷ 957 ಬಾರಿ ಕದನವಿರಾಮ ಉಲ್ಲಂಘಿಸಿದೆ’ ಎಂದು ಪಾಕ್‌ ತಿಳಿಸಿದೆ.‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT