ಗುರುವಾರ , ಜುಲೈ 29, 2021
26 °C

ಭಾರತದ ಗುಂಡಿನ ದಾಳಿಗೆ ನಾಲ್ವರು ನಾಗರಿಕರ ಸಾವು: ಪಾಕ್‌

ಪಿಟಿಐ Updated:

ಅಕ್ಷರ ಗಾತ್ರ : | |

pakistan

ಇಸ್ಲಾಮಾಬಾದ್‌: ಗಡಿ ನಿಯಂತ್ರಣ ರೇಖೆ ಬಳಿ ಭಾರತ ನಡೆಸಿದ ಗುಂಡಿನ ದಾಳಿಯಲ್ಲಿ ಪಾಕಿಸ್ತಾನದ ಮಹಿಳೆ ಸೇರಿದಂತೆ ನಾಲ್ವರು ನಾಗರಿಕರು ಸಾವಿಗೀಡಾಗಿದ್ದಾರೆ ಎಂದು ಸೇನಾಪಡೆಯ ವಕ್ತಾರರು ಆರೋಪಿಸಿದ್ದಾರೆ.

ನಿಕಿಯಲ್‌ ಮತ್ತು ಬಗ್ಸಾರ್‌ ಪ್ರದೇಶಗಳ ಜನರ ಮೇಲೆ ಗುಂಡಿನ ದಾಳಿ ನಡೆದಿದೆ ಎಂದು ವಕ್ತಾರ ಮೇಜರ್‌ ಜನರಲ್‌ ಬಾಬರ್‌ ಇಫ್ತಿಕರ್‌ ಆಪಾದಿಸಿದ್ದಾರೆ.

ಈ ಪ್ರದೇಶಗಳಲ್ಲಿ ಭಾರತದ ಸೇನಾಪಡೆಯವರು ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸಿದ್ದಾರೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪಾಕಿಸ್ತಾನದ ಸೇನಾಪಡೆಯೂ ದಾಳಿಗೆ ತಕ್ಕ ಉತ್ತರ ನೀಡಿತು ಎಂದೂ ಅವರು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು