ಶನಿವಾರ, ಅಕ್ಟೋಬರ್ 19, 2019
27 °C

ಪಾಕಿಸ್ತಾನದಲ್ಲಿ ಹಿಂದೂ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವು: ಪ್ರತಿಭಟನೆ

Published:
Updated:

ಕರಾಚಿ: ಪಾಕಿಸ್ತಾನದಲ್ಲಿ ಹಿಂದೂ ವೈದ್ಯಕೀಯ ವಿದ್ಯಾರ್ಥಿನಿಯ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸುವಂತೆ ಆಗ್ರಹಿಸಿ ಸಿಂದ್‌ ಪ್ರಾಂತ್ಯದ ನಾಗರೀಕರು ಕಳೆದ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ.

ಸಿಂಧ್ ಪ್ರಾಂತ್ಯದ ದಂತ ವೈದ್ಯಕೀಯ ಕಾಲೇಜಿನಲ್ಲಿ ನಮ್ರತಾ ಚಾಂದಿನಿ ವಿದ್ಯಾಭ್ಯಾಸ ಮಾಡುತ್ತಿದ್ದರು. ನಮ್ರತಾ ಚಾಂದಿನಿ ವಾಸವಿದ್ದ ವಸತಿ ನಿಲಯದಲ್ಲಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಮಂಗಳವಾರ ಪತ್ತೆಯಾಗಿತ್ತು. ನಮ್ರತಾ ಚಾಂದಿನಿಯನ್ನು ಹತ್ಯೆ ಮಾಡಲಾಗಿದೆ ಎಂದು ಅವರು ಕುಟುಂಬದವರು, ಸಂಬಂಧಿಕರು ಹಾಗೂ ವಿದ್ಯಾರ್ಥಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. 

ಘಟನೆ ಸಂಬಂಧ ಪಾಕಿಸ್ತಾನ ಪೊಲೀಸರು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. 

ನಮ್ರತಾ ಚಾಂದಿನಿಯ  ಅನುಮಾನಾಸ್ಪದ ಸಾವಿನ ಬಗ್ಗೆ ತನಿಖೆ ನಡೆಸಿ ತಪ್ಪತಸ್ಥರಿಗೆ ಕಠಣ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿ ಸಿಂದ್‌ ಪ್ರಾಂತ್ಯ ಹಾಗೂ ಕರಾಚಿಯಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಕಳೆದ ರಾತ್ರಿಯಿಂದ ಪ್ರತಿಭಟನೆಗಳು ಆರಂಭವಾಗಿವೆ. 

Post Comments (+)