ಭಾನುವಾರ, ನವೆಂಬರ್ 17, 2019
24 °C

ಜಮ್ಮು –ಕಾಶ್ಮೀರ: ಹೊಸ ನಕ್ಷೆಗೆ ಪಾಕ್‌ ವಿರೋಧ

Published:
Updated:

ಇಸ್ಲಾಮಾಬಾದ್: ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಖ್‌ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡು ಭಾರತ ಸರ್ಕಾರ ಹೊಸದಾಗಿ ಬಿಡುಗಡೆ ಮಾಡಿರುವ ನಕ್ಷೆಯನ್ನು ಪಾಕಿಸ್ತಾನ ಸರ್ಕಾರ ತಿರಸ್ಕರಿಸಿದೆ. ‘ನಕ್ಷೆ ಸರಿಯಾದುದಲ್ಲ ಮತ್ತು ಕಾನೂನಾತ್ಮಕವಾಗಿ ಸಮ್ಮತವಾದುದಲ್ಲ’ ಎಂದು ಹೇಳಿದೆ.

ಈ ಕುರಿತು ಹೇಳಿಕೆಯಲ್ಲಿ ಪಾಕಿಸ್ತಾನದ ವಿದೇಶಾಂಗ ಸಚಿವಾಲಯ, ‘ಜಮ್ಮು ಮತ್ತು ಕಾಶ್ಮೀರವನ್ನು ಒಳಗೊಂಡ, ಗಿಲ್ಗಿಟ್–ಬಾಲ್ಟಿಸ್ತಾನ್‌ ಮತ್ತು ಅಜಾದ್ ಜಮ್ಮು ಅನ್ನು ಭಾರತದ ಭೌಗೋಳಿಕ ವ್ಯಾಪ್ತಿಗೆ ಸೇರಿದೆ ಎಂದು ತೋರಿಸುವ ನಕ್ಷೆಯು ಸರಿಯಲ್ಲ. ಇದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ನಿರ್ಣಯದ ಉಲ್ಲಂಘನೆಯಾಗಿದೆ’ ಎಂದು ಪ್ರತಿಪಾದಿಸಿದೆ.

ಪ್ರತಿಕ್ರಿಯಿಸಿ (+)