ಶುಕ್ರವಾರ, ಜೂಲೈ 3, 2020
21 °C

ಪಾಕಿಸ್ತಾನ: ಕೋವಿಡ್-19 ಸೋಂಕಿತರ ಸಂಖ್ಯೆ 58,278ಕ್ಕೆ ಏರಿಕೆ, 1,202 ಜನರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಇಸ್ಲಾಮಾಬಾದ್: ದಿನದಿಂದ ದಿನಕ್ಕೆ ಇಡೀ ವಿಶ್ವದಾದ್ಯಂತ ಕೊರೊನಾ ವೈರಸ್ ಸೋಂಕು ಜಾಸ್ತಿಯಾಗುತ್ತಲೇ ಇದ್ದು, ಪಾಕಿಸ್ತಾನದಲ್ಲಿ ಕೋವಿಡ್-19 ಸೋಂಕಿತರ ಸಂಖ್ಯೆ 58,278ಕ್ಕೆ ಏರಿದ್ದರೆ, ಇದುವರೆಗೂ 1,202 ಜನರು ಮೃತಪಟ್ಟಿದ್ದಾರೆ ಎಂದು ಪಾಕಿಸ್ತಾನದ ಆರೋಗ್ಯ ಸಚಿವಾಲಯ ತಿಳಿಸಿದೆ.

ಜಿಯೊ ನ್ಯೂಸ್ ವರದಿ ಪ್ರಕಾರ, ಸಿಂಧ್ ಪ್ರಾಂತ್ಯದಲ್ಲಿ 23,507, ಪಂಜಾಬ್‌ನಲ್ಲಿ 20,654, ಖೈಬರ್-ಫಕ್ತುಂಕ್ವದಲ್ಲಿ 8,080, ಬಲೂಚಿಸ್ತಾನದಲ್ಲಿ 3,468, ಇಸ್ಲಾಮಾಬಾದ್‌ನಲ್ಲಿ 1,728 , ಗಿಲ್ಗಿಚ್-ಬಲ್ತಿಸ್ತಾನ್‌ನಲ್ಲಿ 630  ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ 211 ಕೋವಿಡ್-19 ಪ್ರಕರಣಗಳು ವರದಿಯಾಗಿವೆ.

ವಿಪಕ್ಷ ನಾಯಕ ಮತ್ತು ಪಾಕಿಸ್ತಾನ ಮುಸ್ಲಿಂ ಲೀಗ್ (ಪಿಎಂಎಲ್-ಎನ್) ಅಧ್ಯಕ್ಷ ಶೇಹ್‌ಬಾಜ್ ಶರೀಫ್ ಇಮ್ರಾನ್ ಖಾನ್ ಸರ್ಕಾರವನ್ನು ಟೀಕಿಸಿದ್ದು, ಕೋವಿಡ್-19 ಲಾಕ್‌ಡೌನ್ ತೆರೆಯುವ ಮೊದಲೇ ಜಾರಿಯಲ್ಲಿದ್ದ ನೀತಿಯು ದೇಶದಲ್ಲಿ ಕೋವಿಡ್-19 ಸಾವುಗಳನ್ನು ಕಡಿಮೆ ಮಾಡಬಹುದಿತ್ತು ಎಂದು ತಿಳಿಸಿರುವುದಾಗಿ ಜಿಯೊ ನ್ಯೂಸ್ ವರದಿ ಮಾಡಿದೆ.

ಅಲ್ಲದೆ, ಪಾಕಿಸ್ತಾನ ಸರ್ಕಾರವು ಸಮಯವನ್ನು ವ್ಯರ್ಥ ಮಾಡಬಾರದು ಮತ್ತು ಮಾರಕ ಸಾಂಕ್ರಾಮಿಕ ರೋಗವನ್ನು ಎದುರಿಸಲು ರಾಷ್ಟ್ರೀಯ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಒತ್ತಾಯಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು