ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

370ನೇ ವಿಧಿ ರದ್ದತಿಗೆ ಧನ್ಯವಾದ: ಪ್ರಧಾನಿ ಮೋದಿ ಭೇಟಿ ಮಾಡಿದ ಕಾಶ್ಮೀರಿ ಪಂಡಿತರು

Last Updated 22 ಸೆಪ್ಟೆಂಬರ್ 2019, 5:37 IST
ಅಕ್ಷರ ಗಾತ್ರ

ಹ್ಯೂಸ್ಟನ್:ಜಮ್ಮು–ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದಕ್ಕೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಕಾಶ್ಮೀರಿ ಪಂಡಿತರ ನಿಯೋಗ ಧನ್ಯವಾದ ಸಮರ್ಪಿಸಿದೆ.

‘ಹೌಡಿ ಮೋದಿ’ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ಅಮೆರಿಕ ತಲುಪಿರುವ ಮೋದಿಯವರನ್ನು ಭೇಟಿ ಮಾಡಿದಪಂಡಿತರ ನಿಯೋಗವು ಮಾತುಕತೆ ನಡೆಸಿತು. ಈ ವೇಳೆ, ಸದಸ್ಯರೊಬ್ಬರು ‘7 ಲಕ್ಷ ಕಾಶ್ಮೀರಿ ಪಂಡಿತರ ಪರವಾಗಿ ನಿಮಗೆ ಧನ್ಯವಾದಗಳು’ ಎಂದು ಮೋದಿ ಬಳಿ ಹೇಳಿದರು.

ಕಾಶ್ಮೀರಿ ಪಂಡಿತರನ್ನು ವಾಪಸ್ ಕಳುಹಿಸುವ, ಆ ಪ್ರದೇಶವನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸಮುದಾಯದ ನಾಯಕರು, ತಜ್ಞರು, ಬಂಡವಾಳಗಾರರನ್ನು ಒಗ್ಗೂಡಿಸಲು ಗೃಹ ಸಚಿವಾಲಯದ ಅಧೀನದಲ್ಲಿ ಪಂಡಿತ ಸಮುದಾಯದ ಕಾರ್ಯಪಡೆಯೊಂದನ್ನು ರಚಿಸಬೇಕು ಎಂದೂ ನಿಯೋಗ ಮನವಿ ಸಲ್ಲಿಸಿತು.

ಬಹುನಿರೀಕ್ಷಿತ ‘ಹೌಡಿ ಮೋದಿ!’ ಕಾರ್ಯಕ್ರಮ ಭಾರತೀಯ ಕಾಲಮಾನ ಪ್ರಕಾರ ಇಂದು ರಾತ್ರಿ ನಡೆಯಲಿದೆ.ಕಾರ್ಯಕ್ರಮದಲ್ಲಿ 50 ಸಾವಿರ ಭಾರತೀಯ ಅಮೆರಿಕನ್ನರು ಭಾಗವಹಿಸುವ ನಿರೀಕ್ಷೆಯಿದೆ.ಪೋಪ್‌ ಹೊರತುಪಡಿಸಿ ವಿದೇಶದ ಯಾವುದೇ ಚುನಾಯಿತ ಪ್ರತಿನಿಧಿ ಭಾಗವಹಿಸಲಿರುವ ಸಭೆಯಲ್ಲಿ ಸೇರುತ್ತಿರುವ ಅತ್ಯಧಿಕ ಪ್ರೇಕ್ಷಕರ ಸಂಖ್ಯೆ ಇದಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT