ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನವಾಜ್‌ ಕೊಠಡಿಯಿಂದ ಎ.ಸಿ. ತೆರವು ಬೇಡ: ಷರೀಫ್‌ ಮನವಿ

Last Updated 28 ಜುಲೈ 2019, 20:01 IST
ಅಕ್ಷರ ಗಾತ್ರ

ಲಾಹೋರ್: ಪಾಕಿಸ್ತಾನದ ಮಾಜಿ ಪ್ರಧಾನಿ ನವಾಜ್‌ ಷರೀಫ್‌ ಅವರನ್ನು ಇರಿಸಿರುವ ಜೈಲು ಕೊಠಡಿಯಿಂದ ಹವಾನಿಯಂತ್ರಣ ವ್ಯವಸ್ಥೆಯನ್ನು (ಎ.ಸಿ) ತೆರವುಗೊಳಿಸಬಾರದು ಎಂದು ಪಾಕಿಸ್ತಾನ ಮುಸ್ಲಿಂ ಲೀಗ್‌ –ನವಾಜ್‌ ಪಕ್ಷದ ವರಿಷ್ಠ ಶಹಬಾಜ್‌ ಷರೀಫ್‌ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಎ.ಸಿ ತೆರವುಗೊಳಿಸಿದರೆ ಅದು ನವಾಜ್‌ ಅವರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ ಮತ್ತು ವೈದ್ಯರ ಶಿಫಾರಸುಗಳಿಗೂ ವಿರುದ್ಧವಾಗಿದೆ ಎಂದಿದ್ದಾರೆ. ನವಾಜ್‌ ಅವರು 2018 ಡಿಸೆಂಬರ್‌ 24ರಿಂದ ಲಾಹೋರ್‌ನ ಕೋಟ್‌ ಲಖ್‌ಪತ್‌ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದಾರೆ.

ಪನಾಮ ಪೇಪರ್ಸ್ ಪ್ರಕರಣದಲ್ಲಿ ಭ್ರಷ್ಟಾಚಾರ ತಡೆ ನ್ಯಾಯಾಲಯವು ಅವರಿಗೆ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು. ಅಮೆರಿಕಕ್ಕೆ ಈಚೆಗೆ ಭೇಟಿ ನೀಡಿದ್ದ ವೇಳೆ ಪ್ರಧಾನಿ ಇಮ್ರಾನ್‌ ಖಾನ್‌ ಅವರು ‘ನಾನು ದೇಶಕ್ಕೆ ಮರಳಿದ ಬಳಿಕ ನವಾಜ್‌ ಅವರ ಜೈಲು ಕೊಠಡಿಯಲ್ಲಿ ಎ.ಸಿ ಹಾಗೂ ಟಿ.ವಿ. ಇಲ್ಲ ಎಂಬುದನ್ನು ಖಾತರಿ ಪಡಿಸಿಕೊಳ್ಳಲಿದ್ದೇನೆ’ ಎಂದಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT