ಬುಧವಾರ, ಜುಲೈ 28, 2021
21 °C

ಜಾರ್ಜ್ ಫ್ಲಾಯ್ಡ್‌ ಹತ್ಯೆ: ಪೊಲೀಸ್‌ ಅಧಿಕಾರಿಯನ್ನು ಗುಂಡಿಕ್ಕಿ ಹತ್ಯೆ

ಎಪಿ Updated:

ಅಕ್ಷರ ಗಾತ್ರ : | |

ಸಾಂದರ್ಭಿಕ ಚಿತ್ರ

ನ್ಯೂಯಾರ್ಕ್‌: ಅಮೆರಿಕದ ಬಿಳಿ ಪೊಲೀಸರ ದಬ್ಬಾಳಿಕೆಗೆ ಬಲಿಯಾದ ಜಾರ್ಜ್ ಫ್ಲಾಯ್ಡ್‌ ಹತ್ಯೆಗೆ ಪ್ರತಿಯಾಗಿ ಒಬ್ಬ ಪೊಲೀಸ್‌ ಅಧಿಕಾರಿಯನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ನ್ಯೂಯಾರ್ಕ್‌ ಸಿಟಿ ಪೊಲೀಸ್‌ ಇಲಾಖೆ ಹೇಳಿದೆ.

ಬ್ರೊಕ್ಲಿನ್‌ ಪ್ರದೇಶದಲ್ಲಿ ಬುಧವಾರ ರಾತ್ರಿ ಗುಂಡಿಕ್ಕಿ ಅಧಿಕಾರಿಯನ್ನು ಕೊಲ್ಲಲಾಗಿದೆ. ರಾತ್ರಿ 8ಕ್ಕೆ ನಗರದಾದ್ಯಂತ ಕರ್ಫೂ ಹೇರಲಾಗಿತ್ತು. ಇದಾದ ನಾಲ್ಕು ಗಂಟೆಗಳ ಬಳಿಕ ಈ ಘಟನೆ ನಡೆದಿದೆ.

ಘಟನೆಯ ವಿವರ ಹಾಗೂ ಪೊಲೀಸ್‌ ಅಧಿಕಾರಿಯ ಆರೋಗ್ಯ ಸ್ಥಿತಿಯ ಬಗ್ಗೆ ತಕ್ಷಣದಲ್ಲಿ ಮಾಹಿತ ಲಭ್ಯ ಇಲ್ಲ. ಘಟನೆ ನಡೆದ ಸ್ಥಳದ ಸುತ್ತ ಪೊಲೀಸ್‌ ವಾಹನಗಳು ಸುತ್ತುವರಿದ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.

ಬಿಳಿ ಪೊಲೀಸರ ದೌರ್ಜನ್ಯವನ್ನು ಖಂಡಿಸಿ ನ್ಯೂಯಾರ್ಕ್‌ ಸುತ್ತ ಹಲವು ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿವೆ. ಆದರೆ, ಈ ಘಟನೆಗೂ ಪ್ರತಿಭಟನಾಕಾರರಿಗೂ ನೇರ ಸಂಬಂಧ ಇರಿವ ಬಗ್ಗೆ ಖಚಿತ ಮಾಹಿತಿ ಇಲ್ಲವಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು