ಮಂಗಳವಾರ, ಏಪ್ರಿಲ್ 13, 2021
23 °C

ಸೆಪ್ಟೆಂಬರ್‌ನಲ್ಲಿ ಪ್ರಧಾನಿ ಮೋದಿ ಅಮೆರಿಕ ಪ್ರವಾಸ

ಪಿಟಿಐ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಸೆಪ್ಟೆಂಬರ್‌ನಲ್ಲಿ ನಡೆಯಲಿರುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಮಹಾಧಿವೇಶನದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕಕ್ಕೆ ತೆರಳಲಿದ್ದಾರೆ. ಆದರೆ ಪ್ರಧಾನಿ ಅವರ  ಪ್ರವಾಸದ ಕುರಿತು ಅಧಿಕೃತ ಘೋಷಣೆ ಇನ್ನೂ ಆಗಿಲ್ಲ. 

ಇದೇ ವೇಳೆ ಹ್ಯೂಸ್ಟನ್‌ನಲ್ಲಿ ಅನಿವಾಸಿ ಭಾರತೀಯ ಸಮುದಾಯದವರನ್ನು ಉದ್ದೇಶಿಸಿ ಪ್ರಧಾನಿ ಮಾತನಾಡಲಿದ್ದಾರೆ. 

ಭಾರತೀಯ ಸಮುದಾಯವನ್ನು ಉದ್ದೇಶಿಸಿ ಪ್ರಧಾನಿ ಮಾತನಾಡುವುದು ಇನ್ನೂ ಅಂತಿಮಗೊಂಡಿಲ್ಲ. ಆದರೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ತಿಳಿಸಲಾಗಿದೆ. ಹ್ಯೂಸ್ಟನ್‌ನಲ್ಲಿ ಸೆ.22 ರಂದು ಪ್ರಧಾನಿ ಭಾಷಣ ಆಯೋಜನೆಯಾಗುವ ಸಾಧ್ಯತೆ ಇದೆ.

ಈಗಾಗಲೇ ಮೋದಿ ಅವರು ಅಮೆರಿಕದಲ್ಲಿ ಎರಡು ಬಾರಿ ಭಾರತೀಯ ಸಮುದಾಯ ಉದ್ದೇಶಿಸಿ ಮಾತನಾಡಿದ್ದಾರೆ. 2014 ರಲ್ಲಿ ಪ್ರಧಾನಿಯಾದ ನಂತರ, ನ್ಯೂಯಾರ್ಕ್‌ನ ಮ್ಯಾಡಿಸನ್‌ ಸ್ಕ್ವೇರ್‌ ಹಾಗೂ ಸಿಲಿಕಾನ್‌ ವ್ಯಾಲಿಯಲ್ಲಿ ನಡೆದ ಕಾರ್ಯಕ್ರಮಕ್ಕೆ 20 ಸಾವಿರಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು