ಗುರುವಾರ , ಜನವರಿ 23, 2020
19 °C

ಇರಾನ್‌: ಅಣು ವಿದ್ಯುತ್‌ ಸ್ಥಾವರದ ಬಳಿ ಭೂಕಂಪನ

ಎಎಫ್‌ಪಿ Updated:

ಅಕ್ಷರ ಗಾತ್ರ : | |

ಟೆಹರಾನ್‌: ಇರಾನ್‌ನ ಬುಶೆರ್‌ ಅಣು ವಿದ್ಯುತ್‌ ಸ್ಥಾವರದಿಂದ 50 ಕಿ.ಮೀ. ದೂರದ ಪ್ರದೇಶದಲ್ಲಿ ಬುಧವಾರ ಭೂಕಂಪನ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಿಕ್ಟರ್‌ ಮಾಪಕದಲ್ಲಿ 4.5 ತೀವ್ರತೆ ದಾಖಲಾಗಿದೆ ಎಂದು ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ಸಂಸ್ಥೆ ತಿಳಿಸಿದೆ.

ಬೊರಜ್ಜನ್‌ ನಗರದಿಂದ 17 ಕಿ.ಮೀ. ದೂರದಲ್ಲಿ ಭೂಮಿಯ 10 ಕಿ.ಮೀ. ಆಳದಲ್ಲಿ ಭೂಕಂಪನದ ಕೇಂದ್ರಬಿಂದುವನ್ನು ಗುರುತಿಸಲಾಗಿದೆ ಎಂದಿದೆ. 

ಅಣು ವಿದ್ಯುತ್‌ ಸ್ಥಾವರಕ್ಕೆ ಯಾವುದೇ ಹಾನಿಗಳಾದ ಬಗ್ಗೆ ವರದಿಯಾಗಿಲ್ಲ ಎಂದು ಇರಾನ್‌ನ ಸರ್ಕಾರಿ ಸ್ವಾಮ್ಯದ ಸುದ್ದಿ ಸಂಸ್ಥೆ ಐಆರ್‌ಎನ್‌ಎ ತಿಳಿಸಿದೆ.

 

 

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು