ಪಾಕಿಸ್ತಾನದಲ್ಲಿ ಭಾರಿ ಮಳೆ: 15 ಸಾವು

7

ಪಾಕಿಸ್ತಾನದಲ್ಲಿ ಭಾರಿ ಮಳೆ: 15 ಸಾವು

Published:
Updated:
ಪಾಕಿಸ್ತಾನದಲ್ಲಿ ಭಾರಿ ಮಳೆ ಸುರಿಯುತ್ತಿರುವುದರಿಂದ ರಸ್ತೆಯೊಂದು ಕುಸಿದಿದೆ ಪಿಟಿಐ ಚಿತ್ರ

ಲಾಹೋರ್: 38 ವರ್ಷಗಳ ನಂತರ ಪಾಕಿಸ್ತಾನದ ಲಾಹೋರ್‌ನಲ್ಲಿ ಭಾರಿ ಮಳೆಯಾಗುತ್ತಿದ್ದು, ಮೃತರ ಸಂಖ್ಯೆ 15ಕ್ಕೆ ಏರಿದೆ ಎಂದು ಮಾಧ್ಯಗಳು ವರದಿ ಮಾಡಿವೆ.

ಗುರುವಾರವೂ ಭಾರಿ ಮಳೆ ಸುರಿದಿದ್ದು, ಮುಂದಿನ 24 ಗಂಟೆಗಳ ಕಾಲ ಇದೇ ಸ್ಥಿತಿ ಮುಂದುವರಿಯಲಿದೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿ (ಎನ್‌ಡಿಎಂಎ) ತಿಳಿಸಿದೆ.

ಮಳೆಯಿಂದಾಗಿ ಹಲವು ಕಡೆ ವಿದ್ಯುತ್ ಅವಘಡ ಸಂಭವಿಸಿದೆ. ಅಲ್ಲದೆ ದೊಡ್ಡ ಕಟ್ಟಡಗಳು ಕುಸಿದ ಪರಿಣಾಮ ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಪಂಜಾಬ್‌ ಪ್ರಾಂತ್ಯದಲ್ಲಿ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಪಾರ ಪ್ರಮಾಣದ ಹಾನಿ ಸಂಭವಿಸಿದ್ದು, ಮೃತಪಟ್ಟ 15 ಮಂದಿ ಇಲ್ಲಿಯವರು. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !