ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫ್ರಾನ್ಸ್‌ ಜತೆಗಿನ ಮಾತುಕತೆ ಫಲಪ್ರದ: ರಾಜನಾಥ್‌

Last Updated 9 ಅಕ್ಟೋಬರ್ 2019, 20:00 IST
ಅಕ್ಷರ ಗಾತ್ರ

ಪ್ಯಾರಿಸ್‌: ಫ್ರಾನ್ಸ್‌ ಜತೆಗಿನ ರಕ್ಷಣಾ ಒಪ್ಪಂದಗಳನ್ನು ಸಂಪೂರ್ಣವಾಗಿ ಪರಿಶೀಲಿಸಲಾಗಿದ್ದು, ಮಾತುಕತೆ ಫಲಪ್ರದವಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ ಹೇಳಿದ್ದಾರೆ.

ಭಯೋತ್ಪಾದನೆ ನಿಗ್ರಹದ ಬಗ್ಗೆ ದ್ವಿಪಕ್ಷೀಯ ಸಹಕಾರವನ್ನು ಮತ್ತಷ್ಟು ಗಟ್ಟಿಗೊಳಿಸುವ ಭಾರತ ಮತ್ತು ಫ್ರಾನ್ಸ್‌ನ ಉದ್ದೇಶವನ್ನು ಉಭಯ ನಾಯಕರು ಪುನರುಚ್ಚರಿಸಿದ್ದಾರೆ ಎಂದು ರಕ್ಷಣಾ ಸಚಿವಾಲಯ ಬಿಡುಗಡೆಮಾಡಿದ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ಯಾರಿಸ್‌ನಲ್ಲಿ ಫ್ರಾನ್ಸ್‌ ರಕ್ಷಣಾ ಸಚಿವ ಪ್ಲೋರೆನ್ಸ್‌ ಪಾರ್ಲಿ ಅವರೊಂದಿಗೆ ನಡೆದ ವಾರ್ಷಿಕ ರಕ್ಷಣಾ ಸಭೆಯು ಫಲಪ್ರದವಾಗಿದೆ ಎಂದು ಸಿಂಗ್ ಅವರು ಸಭೆಯ ನಂತರ ಟ್ವೀಟ್‌ ಮಾಡಿದ್ದಾರೆ.

ಭಾರತ–ಫ್ರಾನ್ಸ್‌ ಸಚಿವರ ಮಟ್ಟದಲ್ಲಿ ಪ್ಯಾರಿಸ್‌ನಲ್ಲಿ ನಡೆದ ಎರಡನೇ ವಾರ್ಷಿಕ ರಕ್ಷಣಾ ಸಭೆ ಇದಾಗಿತ್ತು.

ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ನಡೆಯುತ್ತಿರುವ ಸಮಕಾಲೀನ ಬೆಳವಣಿಗೆಗಳ ಬಗ್ಗೆ ಇಬ್ಬರು ನಾಯಕರು ಅಭಿಪ್ರಾಯ ವಿನಿಮಯ ಮಾಡಿಕೊಂಡಿದ್ದು, ಅಸ್ತಿತ್ವದಲ್ಲಿರುವ ನಿಯಮಿತ ದ್ವಿಪಕ್ಷೀಯ ಜಂಟಿ ಸಮರಾಭ್ಯಾಸದ ವ್ಯಾಪ್ತಿ ವಿಸ್ತರಿಸಲು ಒಪ್ಪಿಗೆ ಸೂಚಿಸಿ
ದ್ದಾರೆ ಎಂದು ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT