ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಪ್ರಧಾನಿ: ಸಂಭಾವ್ಯ ಪಟ್ಟಿಯಲ್ಲಿ ರಿಷಿ ಸುನಾಕ್

Last Updated 8 ಏಪ್ರಿಲ್ 2020, 20:29 IST
ಅಕ್ಷರ ಗಾತ್ರ

ಲಂಡನ್‌: ಬ್ರಿಟನ್‌ನ ಹಣಕಾಸು ಸಚಿವ ಭಾರತ ಮೂಲದ ರಿಷಿ ಸುನಾಕ್‌ ಅವರು ಉಪಪ್ರಧಾನಿ ಹುದ್ದೆ ನಿರ್ವಹಿಸುವವರ ಸಂಭಾವ್ಯ ಪಟ್ಟಿಯಲ್ಲಿ ಇದ್ದಾರೆ.

ಪ್ರಧಾನಿ ಬೋರಿಸ್‌ ಜಾನ್ಸನ್‌ಅವರು ಸೋಂಕಿನಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿದ್ದಾರೆ.ಈ ಸಂದರ್ಭದಲ್ಲಿ ವಿದೇಶಾಂಗಕಾರ್ಯದರ್ಶಿ ಡೊಮಿನಿಕ್‌ ರಾಬ್‌ ಅವರು ಕೊರೊನಾ ಪರಿಸ್ಥಿತಿ ನಿಯಂತ್ರಿಸಲು ಸಾಧ್ಯವಾಗದೇ ಇದ್ದರೆ,ಇನ್ಫೊಸಿಸ್‌ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಅವರ ಅಳಿಯ ಸುನಾಕ್‌ ಅವರು ಹುದ್ದೆಯ ಶ್ರೇಣಿ ಆಧಾರದಲ್ಲಿ ಸಹಜವಾಗಿಯೇ ಉಪಪ್ರಧಾನಿಯ ಹೊಣೆ ವಹಿಸಿಕೊಳ್ಳಲಿದ್ದಾರೆ ಎಂದು ಪ್ರಧಾನಿ ಕಚೇರಿ ಡೌನಿಂಗ್‌ ಸ್ಟ್ರೀಟ್‌ ಹೇಳಿದೆ.

ಜಾನ್ಸನ್‌ ಅವರು, ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಸದ್ಯ ಅವರು ಐಸಿಯುನಲ್ಲಿ ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT