ಮಂಗಳವಾರ, 16 ಏಪ್ರಿಲ್ 2024

ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಎಂ ಪರ‍್ರೀಕರ್‌ ಆರೋಗ್ಯ ಕುರಿತು ಆರ್‌ಟಿಐ ಅರ್ಜಿ ಸಲ್ಲಿಸಿದ್ದಕ್ಕೆ ಬಂಧನ: ಉದ್ಯಮಿ ಆರೋಪ

Last Updated 23 ಏಪ್ರಿಲ್ 2018, 11:23 IST
ಅಕ್ಷರ ಗಾತ್ರ

ಪಣಜಿ: ಗೋವಾ ಮುಖ್ಯಮಂತ್ರಿ ಆರೋಗ್ಯ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳುಸುದ್ದಿ ಹರಡುತ್ತಿದ್ದ ಆರೋಪದ ಮೇಲೆ ಬಂಧನಕ್ಕೊಳಗಾಗಿ ಬಿಡುಗಡೆಯಾಗಿರುವ ಉದ್ಯಮಿ ಕೆನ್ನೆತ್‌ ಸಿಲ್ವಿರಾ ಎನ್ನುವವರು, ಪರ‍್ರೀಕರ್‌ ಆರೋಗ್ಯ ಕುರಿತು ಮಾಹಿತಿ ಹಕ್ಕು ಕಾಯಿದೆ (ಆರ್‌ಟಿಐ) ಅಡಿಯಲ್ಲಿ ಅರ್ಜಿ ಸಲ್ಲಿಸಿದ‌ ಕಾರಣ ನನ್ನನ್ನು ಬಂಧಿಸಲಾಗಿತ್ತು ಎಂದು ಆರೋಪಿಸಿದ್ದಾರೆ.

‘ಬಿಜೆಪಿ ಸರ್ಕಾರಕ್ಕೆ ನನ್ನ ಭಯವಿದೆ ಮತ್ತು ಇಂತಹ ಕೆಲವು ಕಾರಣಗಳಿಂದಾಗಿ ನನ್ನನ್ನು ಅಕ್ರಮವಾಗಿ ಬಂಧಿಸಿ ನನ್ನ ಬಾಯಿ ಮುಚ್ಚಿಸಲು ಪ್ರಯತ್ನಸುತ್ತಿದೆ. ನಾನು ಆರ್‌ಟಿಐ ಅರ್ಜಿ ಸಲ್ಲಿಸಿದ್ದು ನನ್ನ ಬಂಧನಕ್ಕೆ ಕಾರಣವಾಯಿತು’ ಎಂದು ಸಿಲ್ವಿರಾ ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಮುಖ್ಯಮಂತ್ರಿ ಪರ‍್ರೀಕರ್‌ ಅನುಪಸ್ಥಿತಿಯಲ್ಲಿ ಸರ್ಕಾರ ಆಡಳಿತ ಯಾರು ನಡೆಸುತ್ತಿದ್ದಾರೆ, ಪರ್ರೀಕರ್ ಯಾವಾಗ ದೇಶಕ್ಕೆ ಹಿಂದಿರುಗಲಿದ್ದಾರೆ, ಅವರ ಆರೋಗ್ಯಕ್ಕಾಗಿ ರಾಜ್ಯಸರ್ಕಾರ ಮಾಡುತ್ತಿರುವ ವೆಚ್ಚದ ಕುರಿತ ಮಾಹಿತಿ ನೀಡುವಂತೆ ಮುಖ್ಯಮಂತ್ರಿ ಕಚೇರಿಗೆ ಆರ್‌ಟಿಐ ಅರ್ಜಿ ಸಲ್ಲಿಸಿದ್ದರು. ಬಿಡುಗಡೆ ಬಳಿಕ ಅರ್ಜಿಯ ಪ್ರತಿಯನ್ನೂ ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ.

ಆತಂಕ ಸೃಷ್ಟಿ, ಸುಳ್ಳುಸುದ್ದಿ ಹರಡುವಿಕೆಗೆ ಸಂಬಂಧಿಸಿದಂತೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್‌ 505ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಗೋವಾ ಕ್ರೈಂ ವಿಭಾಗದ ಪೊಲೀಸರು ಸಿಲ್ವಿರಾ ಅವರನ್ನು ಏಪ್ರಿಲ್‌ 18ರಂದು ಬಂಧಿಸಿದ್ದರು. ಇದನ್ನು ವಿರೋಧಿಸಿದ್ದ ಹಲವರು ವಾಕ್‌ ಸ್ವಾತಂತ್ರವನ್ನು ಹತ್ತಿಕ್ಕಲಾಗುತ್ತಿದೆ ಎಂದು ಆರೋಪಿಸಿ ಏಪ್ರಿಲ್‌ 20ರಂದು ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು.

ಸಿಲ್ವಿರಾ 2017ರಲ್ಲಿ ಪಣಜಿ ವಿಧಾನಸಭೆಗೆ ನಡೆದಿದ್ದ ಉಪಚುನಾವಣೆಯಲ್ಲಿ ಪರ‍್ರೀಕರ್‌ ವಿರುದ್ಧ ಸ್ಪರ್ಧಿಸಿ ಸೋಲುಕಂಡಿದ್ದರು.

ಪ್ಯಾಂಕ್ರಿಯಾಟೈಸಿಸ್‌(ಮೇದೋಜೀರಕ ಗ್ರಂಥಿ) ತೊಂದರೆಯಿಂದ ಬಳಲುತ್ತಿರುವ ಪರ‍್ರೀಕರ್‌ ಸದ್ಯ ನ್ಯೂಯಾರ್ಕ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT