ಶುಕ್ರವಾರ, ಏಪ್ರಿಲ್ 10, 2020
19 °C
ಪೈಪ್‌ಲೈನ್‌ ಕಾಮಗಾರಿ ವೇಳೆ ಅವಘಡ

ಆರು ಭಾರತೀಯರ ಸಾವು?

ಪಿಟಿಐ Updated:

ಅಕ್ಷರ ಗಾತ್ರ : | |

ದುಬೈ: ಒಮಾನ್‌ನಲ್ಲಿ ಆರು ಕಟ್ಟಡ ನಿರ್ಮಾಣ ಕಾರ್ಮಿಕರು ಮೃತಪಟ್ಟಿದ್ದು, ಇವರು ಭಾರತೀಯರು ಎಂಬ ಶಂಕೆ ವ್ಯಕ್ತವಾಗಿದೆ. ನೀರಿನ ಪೈಪ್‌ಲೈನ್‌ ಕಾಮಗಾರಿಗಾಗಿ ನೆಲ ಅಗೆಯುತ್ತಿದ್ದಾಗ ಈ ಅವಘಡ ಸಂಭವಿಸಿದೆ. 

ಭಾರಿ ಮಳೆ ಬಿದ್ದ ನಂತರ ಮಸ್ಕತ್‌ನ ಸೀಬ್‌ ಪ್ರದೇಶದಲ್ಲಿ ಕಾಮಗಾರಿ ನಡೆಯುತ್ತಿದ್ದ ವೇಳೆ ಭಾನುವಾರ ಈ ಅವಘಡ ನಡೆದಿದೆ ಎಂದು ಮಸ್ಕತ್‌ನಲ್ಲಿನ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ.

ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮತ್ತು ಮೃತರ ಗುರುತು ದೃಢಪಡಿಸಿಕೊಳ್ಳಲು ಒಮನ್‌ ಅಧಿ
ಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿ ಇರುವುದಾಗಿ ರಾಯಭಾರ ಕಚೇರಿ ತಿಳಿಸಿದೆ.

ನೆಲದಿಂದ 14 ಮೀಟರ್‌ ಆಳದಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಮಣ್ಣು ಕುಸಿದಿದೆ ಎನ್ನಲಾಗುತ್ತಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು