ಮಂಗಳವಾರ, ಏಪ್ರಿಲ್ 7, 2020
19 °C

ಶ್ರೀಲಂಕಾ: ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಬಂಧನ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಲಂಬೊ: ರನಿಲ್‌ ನಿಷ್ಠ, ಪೆಟ್ರೋಲಿಯಂ ಸಚಿವ ಅರ್ಜುನ ರಣತುಂಗ ಅವರನ್ನು ಅಪಹರಿಸಲು ಸಿರಿಸೇನ ಬೆಂಬಲಿಗರ ಗುಂಪು ಯತ್ನಿಸಿದಾಗ ರಣತುಂಗ ಅಂಗರಕ್ಷಕರು ಹಾರಿಸಿದ ಗುಂಡಿಗೆ ವ್ಯಕ್ತಿಯೊಬ್ಬರು ಭಾನುವಾರ ಬಲಿಯಾಗಿದ್ದರು. ಈ ಪ್ರಕರಣದಲ್ಲಿ ರಣತುಂಗ ಅವರನ್ನು ಸೋಮವಾರ ಬಂಧಿಸಲಾಗಿದೆ.
ಕೊಲಂಬೊ ಅಪರಾಧ ವಿಭಾಗ ರಣತುಂಗ ಅವರನ್ನು ವಶ ಪಡಿಸಿದ್ದು, ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್ ವಕ್ತಾರ ರುವಾನ್ ಗುಣಶೇಖರ ಹೇಳಿರುವುದಾಗಿ ರಾಯಿಟರ್ಸ್ ವರದಿ ಮಾಡಿದೆ.

 ಶ್ರೀಲಂಕಾ ಪ್ರಧಾನಿ ರನಿಲ್‌ ವಿಕ್ರಮಸಿಂಘೆ ಅವರನ್ನು ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಶುಕ್ರವಾರ  ಪದಚ್ಯುತಗೊಳಿಸಿದ ನಂತರ ಬಿಕ್ಕಟ್ಟು ಉಲ್ಬಣಗೊಂಡಿದ್ದು ಭಾನುವಾರ ಹಿಂಸಾಚಾರ ಭುಗಿಲೆದ್ದಿತ್ತು. 

ಅಧ್ಯಕ್ಷ ಮೈತ್ರಿಸೇನ ಅವರು ರನಿಲ್‌ ವಿಕ್ರಮಸಿಂಘೆ ಅವರನ್ನು ಪದಚ್ಯುತಗೊಳಿಸಿ, ಮಹಿಂದ ರಾಜಪಕ್ಸೆ ಅವರನ್ನು ನೂತನ ಪ್ರಧಾನಿಯಾಗಿ ನೇಮಕ ಮಾಡಿದ್ದರಿಂದ ಉದ್ಭವಿಸಿದ ರಾಜಕೀಯ ಬಿಕ್ಕಟ್ಟಿನ ನಂತರ ವರದಿಯಾದ ಮೊದಲ ಹಿಂಸಾಚಾರ ಪ್ರಕರಣ ಇದಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು