ಶುಕ್ರವಾರ, ಜನವರಿ 24, 2020
17 °C

ಕಾಳ್ಗಿಚ್ಚು: ನ್ಯೂ ಸೌತ್‌ ವೇಲ್ಸ್‌ನಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಕ್ಸ್‌ಟನ್‌(ಎಎಫ್‌ಪಿ): ಭಾರಿ ಕಾಳ್ಗಿಚ್ಚಿನ ಪರಿಣಾಮ ಬಿಸಿಗಾಳಿ ಬೀಸುತ್ತಿರುವುದರಿಂದ ಆಸ್ಟ್ರೇಲಿಯಾದ ನ್ಯೂ ಸೌತ್‌ ವೇಲ್ಸ್‌ ರಾಜ್ಯದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ.

ಬರಪೀಡಿತ ನ್ಯೂ ಸೌತ್‌ ವೇಲ್ಸ್‌ನಲ್ಲಿ 100 ಕ್ಕಿಂತಲೂ ಹೆಚ್ಚು ಕಡೆ ಕಾಳ್ಗಿಚ್ಚು ಉಂಟಾಗಿದ್ದು, ಸಿಡ್ನಿ ನಗರದಲ್ಲೂ ವಿಷಕಾರಿ ಹೊಗೆ ಆವರಿಸಿಕೊಂಡಿದೆ.

‘ಹವಾಮಾನ ಬದಲಾವಣೆಯ ಪರಿಣಾಮ ರಾಜ್ಯದಲ್ಲಿ ಏಳು ದಿನಗಳ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ’ ಎಂದು ನ್ಯೂ ಸೌತ್‌ ವೇಲ್ಸ್‌ನ ಮುಖ್ಯಸ್ಥೆ ಗ್ಲಾಡಿಸ್ ಬೆರೆಜಿಕ್ಲಿಯನ್ ತಿಳಿಸಿದ್ದಾರೆ.

ದಕ್ಷಿಣ ಆಸ್ಟ್ರೇಲಿಯಾದಲ್ಲಿ ತಾಪಮಾನ 50 ಡಿಗ್ರಿ ಸೆಲ್ಸಿಯಸ್‌ ಹಾಗೂ ಸಿಡ್ನಿಯ ಪಶ್ಚಿಮ ಉಪನಗರಗಳಲ್ಲಿ 45 ಡಿಗ್ರಿ ಸೆಲ್ಸಿಯಸ್‌ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ದೇಶದಾದ್ಯಂತ 40.9 ಡಿಗ್ರಿ ಸೆಲ್ಸಿಯಸ್‌ ತಾಪಮಾನ ದಾಖಲಾಗಿತ್ತು.

ಅಗ್ನಿಶಾಮಕ ದಳದ ಎರಡು ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅಮೆರಿಕ ಮತ್ತು ಕೆನಡಾದ ತಂಡಗಳು ಹಾಗೂ ಆಸ್ಟ್ರೇಲಿಯಾದ ಭದ್ರತಾ ಪಡೆಯ ಸಿಬ್ಬಂದಿ ಕೂಡ ಇವರಿಗೆ ಸಹಕಾರ ನೀಡುತ್ತಿದ್ದಾರೆ. ಹವಾಮಾನ ವೈಪರೀತ್ಯದ ಪರಿಣಾಮ ಜನರಲ್ಲಿ ಆರೋಗ್ಯ ಸಮಸ್ಯೆಗಳು ಹೆಚ್ಚಾಗುತ್ತಿವೆ.

ನ್ಯೂ ಸೌತ್‌ ವೇಲ್ಸ್‌ ಮತ್ತು ಕ್ವೀನ್ಸ್‌ಲ್ಯಾಂಡ್‌ ರಾಜ್ಯಗಳಲ್ಲಿ ಬೆಂಕಿಯ ತೀವ್ರತೆ ಹೆಚ್ಚಿದ್ದು, ಈಗಾಗಲೇ ಆರು ಮಂದಿ ಬಲಿಯಾಗಿದ್ದಾರೆ. 800ಕ್ಕೂ ಹೆಚ್ಚು ಮನೆಗಳು ಅಗ್ನಿಗೆ ಆಹುತಿಯಾಗಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು