ಬುಧವಾರ, ಡಿಸೆಂಬರ್ 2, 2020
25 °C

ಅಫ್ಗಾನ್‌: ತಾಲಿಬಾನ್‌ ದಾಳಿ

ಎಪಿ Updated:

ಅಕ್ಷರ ಗಾತ್ರ : | |

ಕಾಬೂಲ್‌: ಅಫ್ಗಾನಿಸ್ತಾನದ ಅತಿದೊಡ್ಡ ನಗರಗಳಲ್ಲಿ ಒಂದಾದ ಕುಂದುಜ್‌ ಮೇಲೆ ತಾಲಿಬಾನ್‌ ದೊಡ್ಡ ಪ್ರಮಾಣದ ದಾಳಿ ನಡೆಸಿದೆ ಎಂದು ಸರ್ಕಾರ ಶನಿವಾರ ತಿಳಿಸಿದೆ. 

ಉಗ್ರರು ಕುಂದುಜ್‌ ಆಸ್ಪತ್ರೆಯ ರೋಗಿಗಳನ್ನು ಒತ್ತೆಯಾಳುಗಳ ರೀತಿ ಕರೆದುಕೊಂಡು ಹೋಗಿದ್ದಾರೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.  ಉಗ್ರರ ದಾಳಿಗೆ ಪ್ರತಿಯಾಗಿ ಸೇನೆ ವೈಮಾನಿಕ ದಾಳಿ ನಡೆಸಿದ್ದು, 26 ತಾಲಿ ಬಾನಿಗಳು ಮೃತಪಟ್ಟಿದ್ದಾರೆ.

‘ಉತ್ತರ ಅಫ್ಗಾನ್‌ ಮತ್ತು ರಾಜ ಧಾನಿ ಕಾಬೂಲ್‌ಗೆ ಸುಲಭವಾಗಿ ಪ್ರವೇಶಿಸಬಹುದಾದ ಆಯಕಟ್ಟಿನ ಸ್ಥಳಗಳಲ್ಲಿ ಭದ್ರತಾ ಪಡೆಗಳು ಉಗ್ರರನ್ನು ಹಿಮ್ಮೆಟ್ಟಿಸುತ್ತಿವೆ’ ಎಂದು ಅಧ್ಯಕ್ಷರ ವಕ್ತಾರ ಸಿದಿಕ್‌ ಸಿದ್ದಿಕಿ ತಿಳಿಸಿದ್ದಾರೆ. 

ಎಲ್ಲಾ ವಿದೇಶಿ ಪಡೆಗಳು ದೇಶವನ್ನು ತೊರೆಯಬೇಕೆಂದು ಉಗ್ರರು ಒತ್ತಾಯಿಸಿದ್ದಾರೆ. ಈ ದಾಳಿಯಲ್ಲಿ ಎಷ್ಟು ಮಂದಿ ನಾಗರಿಕರು ಸಾವನ್ನಪ್ಪಿದ್ದಾರೆ ಎಂಬುದು ತಿಳಿದುಬಂದಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು