ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಾಲಿಬಾನಿ ಉಗ್ರರ ದಾಳಿ ಆರು ಪೊಲೀಸರ ಹತ್ಯೆ

Last Updated 10 ಫೆಬ್ರುವರಿ 2018, 19:48 IST
ಅಕ್ಷರ ಗಾತ್ರ

ಕಂದಹಾರ್ (ಅಫ್ಗಾನಿಸ್ತಾನ): ಇಲ್ಲಿನ ದಕ್ಷಿಣ ಹೆಲ್ಮಂಡ್‌ ಪ್ರಾಂತ್ಯದ ಪೊಲೀಸ್‌ ಚೆಕ್‌ಪೋಸ್ಟ್‌ ಮೇಲೆ ತಾಲಿಬಾನಿ ಉಗ್ರರು ನಡೆಸಿದ ದಾಳಿಯಲ್ಲಿ ಆರು ಪೊಲೀಸರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದಾಳಿಯ ಹೊಣೆಯನ್ನು ತಾಲಿಬಾನ್‌ ಉಗ್ರ ಸಂಘಟನೆ ಹೊತ್ತುಕೊಂಡಿದೆ. ಮೂರು ಚೆಕ್‌ಪೋಸ್ಟ್‌ಗಳ ಮೇಲೆ ದಾಳಿ ಎಸಗಿದ್ದು, 15 ಪೊಲೀಸರನ್ನು ಹತ್ಯೆಗೈಯ್ಯಲಾಗಿದೆ ಎಂದು ಅದು ತಿಳಿಸಿದೆ.

ಇನ್ನೊಂದು ಪ್ರಕರಣದಲ್ಲಿ ಪಶ್ಚಿಮ ಹೆರಾತ್‌ ಪ್ರಾಂತ್ಯದ ಜಿಲ್ಲಾ ನ್ಯಾಯಾಧೀಶರೊಬ್ಬರನ್ನು ಉಗ್ರರು ಹತೈಗೈದಿದ್ದಾರೆ ಎಂದು ಪ್ರಾಂತೀಯ ಪೊಲೀಸ್‌ ವಕ್ತಾರ ಇಕ್ಬಾಲ್ ನಿಜಾಮಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT