ಸೋಮವಾರ, ಜನವರಿ 20, 2020
19 °C

‘ಪಾಕ್‌ ವಿರುದ್ಧ ಹುಸಿ ಕಾರ್ಯಾಚರಣೆ ಸಾಧ್ಯತೆ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ಪೌರತ್ವ(ತಿದ್ದುಪಡಿ) ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಹೋರಾಟದಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಭಾರತವು ‘ಹುಸಿ ಕಾರ್ಯಾಚರಣೆ’ ನಡೆಸುವ ಸಾಧ್ಯತೆ ಇದೆ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‌ ಖಾನ್‌ ಶನಿವಾರ ಆತಂಕ ವ್ಯಕ್ತಪಡಿಸಿದ್ದಾರೆ.

ಇಂತಹ ಕಾರ್ಯಾಚರಣೆಗೆ ಮುಂದಾದರೆ ತಕ್ಕ ಉತ್ತರ ನೀಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ಮೋದಿ ಸರ್ಕಾರದ ಆಡಳಿತದಲ್ಲಿ ಭಾರತವು ಬಲಪಂಥೀಯ ಸಿದ್ಧಾಂತದೊಂದಿಗೆ ಹಿಂದೂ ರಾಷ್ಟ್ರವಾಗುವತ್ತ ಸಾಗುತ್ತಿದೆ‘ ಎಂದಿದ್ದಾರೆ.

‘ಭಾರತದಲ್ಲಿ ಪ್ರತಿಭಟನೆಯ ಕಾವು ಹೆಚ್ಚಾದಂತೆ ಪಾಕಿಸ್ತಾನಕ್ಕೆ ಬೆದರಿಕೆ ಕೂಡ ಹೆಚ್ಚಾಗುತ್ತಿದೆ‘ ಎಂದೂ ಕಳವಳ ವ್ಯಕ್ತಪಡಿಸಿದ್ದಾರೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು