ಶುಕ್ರವಾರ, ಜೂನ್ 5, 2020
27 °C

ತಾಲಿಬಾನ್‌ ಮುಖಂಡರನ್ನು ಭೇಟಿ ಮಾಡಲಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್: ತಾಲಿಬಾನ್ ಜೊತೆ ಅಮೆರಿಕಾ ಒಪ್ಪಂದ ಮಾಡಿಕೊಂಡಿದ್ದನ್ನು ಡೊನಾಲ್ಡ್‌ ಟ್ರಂಪ್‌ ಸಮರ್ಥಿಸಿಕೊಂಡಿದ್ದಾರೆ.

ಮುಂದಿನ ದಿನಗಳಲ್ಲಿ ವೈಯಕ್ತಿಕವಾಗಿ ತಾಲಿಬಾನ್‌  ಮುಖಂಡರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಶ್ವೇತಭವನದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಆಫ್ಗಾನಿಸ್ತಾನದಲ್ಲಿ ಸ್ಥಿರತೆ ಕಾಪಾಡಲು ಎಲ್ಲರೂ ಸಹಕರಿಸಬೇಕು. ಆಫ್ಗಾನಿಸ್ತಾನದಲ್ಲಿರುವ ವಿದೇಶಿ ಸೈನಿಕರನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳುವ ಹಾದಿಯನ್ನು ಈ ಒಪ್ಪಂದ ಸುಗಮಗೊಳಿಸಲಿದೆ’ ಎಂದು ಟ್ರಂಪ್‌ ಪ್ರತಿಪಾದಿಸಿದ್ದಾರೆ.

ಈ ಒಪ್ಪಂದದ ಮೂಲಕ 18 ವರ್ಷಗಳ ಸುದೀರ್ಘ ಯುದ್ಧವನ್ನು ಕೊನೆಗೊಳಿಸಲು ತೀರ್ಮಾನಿಸಲಾಗಿದೆ ಎಂದಿರುವ ಟ್ರಂಪ್‌, ‘ಮುಂದಿನ ದಿನಗಳಲ್ಲಿ ತಾಲಿಬಾನ್ ಮುಖಂಡರೊಂದಿಗಿನ ಮಾತುಕತೆ ಹೆಚ್ಚು ಜಟಿಲವಾಗಲಿದೆ ಎಂದು ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಆದರೆ, ಎಲ್ಲರೂ ಯುದ್ಧದಿಂದ ಬೇಸತ್ತಿದ್ದಾರೆ. ಆ ಕಾರಣಕ್ಕಾಗಿ ಮಾತುಕತೆಗಳು ಯಶಸ್ವಿಯಾಗಲಿವೆ' ಎಂಬ ಭರವಸೆಯನ್ನು ಅವರು ವ್ಯಕ್ತಪಡಿಸಿದ್ದಾರೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು