ಶನಿವಾರ, ಮೇ 30, 2020
27 °C

ಭಾರತೀಯ ಮೂಲದ ವಿಜ್ಞಾನಿಗಳು, ಸಂಶೋಧಕರನ್ನು ಶ್ಲಾಘಿಸಿದ ಟ್ರಂಪ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಕೊರೊನಾ ಸೋಂಕು ನಿವಾರಣೆಗಾಗಿ ಔಷಧಿ ಮತ್ತು ಲಸಿಕೆ ಅಭಿವೃದ್ಧಿಪಡಿಸುತ್ತಿರುವ ಭಾರತೀಯ ಮೂಲದ ವಿಜ್ಞಾನಿಗಳು ಮತ್ತು ಸಂಶೋಧಕರನ್ನು ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಶ್ಲಾಘಿಸಿದ್ದಾರೆ.

ಕೊರೊನಾದ ವಿರುದ್ಧ ಹೋರಾಡಲು ಭಾರತದ ಜೊತೆ ಅಮೆರಿಕ ನಿಕಟವಾಗಿ ಕೆಲಸ ಮಾಡುತ್ತಿದೆ. ಅಮೆರಿಕದಲ್ಲಿ ಹಲವಾರು ಭಾರತೀಯರು ಇದ್ದಾರೆ. ಅವರು ಕೊರೊನಾಕ್ಕಾಗಿ ಲಸಿಕೆಯನ್ನು ಸಿದ್ಧಪಡಿಸುತ್ತಿದ್ದಾರೆ ಎಂದು ಟ್ರಂಪ್‌ ತಿಳಿಸಿದರು. 

ಅಮೆರಿಕದಲ್ಲಿರುವ ಭಾರತೀಯ ಸಮುದಾಯವನ್ನು ಉದ್ದೇಶಿಸಿ ಮಾತನಾಡಿದ ಟ್ರಂಪ್‌, ಇದೇ  ಮೊದಲ ಬಾರಿ ಭಾರತೀಯ ಸಂಜಾತ ವಿಜ್ಞಾನಿ ಮತ್ತು ಸಂಶೋಧಕರ ಕೆಲಸವನ್ನು ಗುರುತಿಸಿ, ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು