ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರೇಕ್ಷಕರಾಗುವುದಕ್ಕಿಂತ, ಕ್ರೀಡೆಯಲ್ಲಿ ಹೆಚ್ಚು ತೊಡಗಬೇಕು: ಸಚಿನ್‌ ತೆಂಡೂಲ್ಕರ್‌

Last Updated 20 ಮೇ 2018, 19:30 IST
ಅಕ್ಷರ ಗಾತ್ರ

ಮುಂಬೈ: ‘ಭಾರತವು ಕ್ರೀಡೆಯನ್ನು ಪ್ರೀತಿಸುವ ರಾಷ್ಟ್ರ. ಆದರೆ, ನಮ್ಮ ಜನರು ಪ್ರೇಕ್ಷಕರಾಗುವುದಕ್ಕಿಂತ ಕ್ರೀಡೆಗಳಲ್ಲಿ ಭಾಗಿಯಾಗುವ ಮನೋಭಾವ ಬೆಳೆಸಿಕೊಳ್ಳಬೇಕಿದೆ’ ಎಂದು ಭಾರತದ ಹಿರಿಯ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌ ಹೇಳಿದ್ದಾರೆ.

ನಗರದಲ್ಲಿ ಬ್ಯಾಡ್ಮಿಂಟನ್ ಕೋರ್ಟ್‌ ಉದ್ಘಾಟಿಸಿದ ಅವರು ಮಾತನಾಡಿದರು.

‘ನಮ್ಮ ದೇಶದಲ್ಲಿ ಕ್ರೀಡಾ ಪಾಲ್ಗೊಳ್ಳುವಿಕೆಯ ಸಂಸ್ಕೃತಿ ಬೆಳೆಯಬೇಕು. ಅದರಿಂದ ನಮ್ಮಲ್ಲಿ ಸ್ಪರ್ಧಾ ಮನೋಭಾವ ಬೆಳೆಯುತ್ತದೆ’ ಎಂದು ಹೇಳಿದ್ದಾರೆ.

‘ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗಲು ಕ್ರೀಡೆ ಸಹಕಾರಿಯಾಗುತ್ತದೆ. ಯಾವುದೇ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಆಡುವುದನ್ನು ರೂಢಿಸಿಕೊಳ್ಳಬೇಕು’ ಎಂದು ಅಭಿಪ್ರಾಯಪಟ್ಟರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT