ಗುರುವಾರ , ಜೂಲೈ 2, 2020
28 °C

ವಿಶ್ವ ಆರೋಗ್ಯ ಸಂಸ್ಥೆಯೊಂದಿಗಿನ ಸಂಬಂಧ ಕೊನೆಗೊಳಿಸಿದ ಅಮೆರಿಕ

ಏಜನ್ಸೀಸ್ Updated:

ಅಕ್ಷರ ಗಾತ್ರ : | |

ವಾಷಿಂಗ್ಟನ್‌: ಕೊರೊನಾ ವೈರಸ್‌ನ ಹರಡುವಿಕೆಯನ್ನು ಆರಂಭದಲ್ಲೇ ತಡೆಯಲು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ವಿಫಲವಾಗಿದ್ದು, ಅದರೊಂದಿಗಿನ ಸಂಬಂಧವನ್ನು ಅಮೆರಿಕ ಕಡಿತಗೊಳಿಸುತ್ತಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತಿಳಿಸಿದ್ದಾರೆ. 

‘ಜಾಗತಿಕ ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಆರೋಗ್ಯ ಸಂಸ್ಥೆ ಸರಿಯಾಗಿ ನಡೆದುಕೊಂಡಿಲ್ಲ,’ ಎಂದು ಈ ಮೊದಲು ಆರೋಪಿಸಿದ್ದ ಟ್ರಂಪ್ ಅದಕ್ಕೆ ಆರ್ಥಿಕ ನೆರವನ್ನು ನಿರ್ಬಂಧಿಸಿದ್ದರು. 

10 ದಿನಗಳ ಹಿಂದೆ ಮತ್ತೆ ವಾಗ್ದಾಳಿ ನಡೆಸಿದ್ದ ಟ್ರಂಪ್‌,  ‘ಡಬ್ಲ್ಯುಎಚ್‌ಒ ಚೀನಾದ ‘ಕೈಗೊಂಬೆ’ ಎಂದು ಆರೋಪಿಸಿದರು, ಅಲ್ಲದೆ, ಅದು ತನ್ನ ನಡೆಗಳಲ್ಲಿ ಸುಧಾರಣೆ ಕಂಡುಕೊಳ್ಳದೇ ಇದ್ದರೆ, ಆರ್ಥಿಕ ನೆರವನ್ನು ಶಾಶ್ವತವಾಗಿ ಕಡಿತಗೊಳಿಸುವುದಾಗಿ ಹೇಳಿದ್ದರು. 

‘ವಿನಂತಿ ಮಾಡಲಾದ ಮತ್ತು ಅತ್ಯಗತ್ಯವಿರುವ ಸುಧಾರಣೆಗಳನ್ನು ಮಾಡಲು ವಿಶ್ವಸಂಸ್ಥೆ ವಿಫಲವಾಗಿದೆ. ಹೀಗಾಗಿ ನಾವು ಅದರೊಂದಿಗಿನ ನಮ್ಮ ಸಂಬಂಧವನ್ನು ಕೊನೆಗೊಳಿಸುತ್ತಿದ್ದೇವೆ,’ ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು