ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಇದೇ 24 ಮತ್ತು 25ರಂದು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ವೈಟ್‌ಹೌಸ್ ಮಂಗಳವಾರ ಘೋಷಿಸಿದೆ.

‘ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಇದೇ 24 ರಿಂದ 25ರ ವರೆಗೆ ಭಾರತಕ್ಕೆ ತೆರಳುತ್ತಿದ್ದಾರೆ. ಟ್ರಂಪ್ ಅವರ ಈ ಭೇಟಿಯೂ ಅಮೆರಿಕ ಮತ್ತು ಭಾರತದ ದ್ವಿಪಕ್ಷೀಯ ಬಾಂಧವ್ಯ ವೃದ್ಧಿಗೆ ಸಹಕಾರಿಯಾಗಲಿದೆ,’ ಎಂದು ವೈಟ್‌ಹೌಸ್ ಟ್ವೀಟ್ ಮಾಡಿದೆ.

ಡೊನಾಲ್ಡ್ ಟ್ರಂಪ್ ಭಾರತ ಪ್ರವಾಸದ ವಿಚಾರವಾಗಿ ಭಾರತ ಮತ್ತು ಅಮೆರಿಕ ದೇಶಗಳು ರಾಜತಾಂತ್ರಿಕ ಸಮಾಲೋಚನೆಯಲ್ಲಿ ತೊಡಗಿವೆ ಎಂದು ಜ.16 ರಂದು ಭಾರತದ ವಿದೇಶಾಂಗ ಇಲಾಖೆ ಅಧಿಕಾರಿಗಳು ತಿಳಿಸಿದ್ದರು. ಅದರಂತೆ ಸಮಾಲೋಚನೆ ಫಲಪ್ರದವಾಗಿದ್ದು, ಟ್ರಂಪ್ ಭಾರತ ಭೇಟಿಯೂ ನಿಗದಿಯಾಗಿದೆ.

ಡೊನಾಲ್ಡ್ ಟ್ರಂಪ್ ಅಧ್ಯಕ್ಷರಾದ ನಂತರ ಭಾರತಕ್ಕೆ ಕೈಗೊಳ್ಳುತ್ತಿರುವ ಮೊದಲ ಪ್ರವಾಸವಿದು. ಈ ಪ್ರವಾಸದಲ್ಲಿ ಟ್ರಂಪ್ ಮತ್ತು ಅವರ ಪತ್ನಿ ದೆಹಲಿ ಮತ್ತು ಅಹಮದಾಬಾದ್‌ಗೆ ಭೇಟಿ ನೀಡಲಿದ್ದಾರೆ.

ಟ್ರಂಪ್ ಅವರಿಗೂ ಹಿಂದೆ ಅಧ್ಯಕ್ಷರಾಗಿದ್ದ ಬರಾಕ್ ಒಬಾಮ ಅವರು 2010 ಮತ್ತು 2015ರಲ್ಲಿ ಎರಡು ಬಾರಿ ಭಾರತಕ್ಕೆ ಭೇಟಿ ನೀಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.