ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚೀನಾ ಪಿಂಚಣಿ ನಿಧಿಯಿಂದ ಶತಕೋಟಿ ಡಾಲರ್‌ ಹಣ ಹಿಂಪಡೆದ ಅಮೆರಿಕ

Last Updated 15 ಮೇ 2020, 2:41 IST
ಅಕ್ಷರ ಗಾತ್ರ

ವಾಷಿಂಗ್ಟನ್‌: ಚೀನಾದ ಪಿಂಚಣಿ ನಿಧಿಯಲ್ಲಿ ಅಮೆರಿಕವು ಹೂಡಿಕೆ ಮಾಡಿರುವ ಶತಕೋಟಿ ಡಾಲರ್‌ಗಿಂತಲೂ ಅಧಿಕ ಹಣವನ್ನು ಟ್ರಂಪ್‌ ನೇತೃತ್ವದ ಸರ್ಕಾರ ಹಿಂಪಡೆದಿದೆ.

ಕೊರೊನಾ ವೈರಸ್‌ ಸೋಂಕಿನ ಹಿನ್ನೆಲೆಯಲ್ಲಿ, ಚೀನಾದೊಂದಿಗೆ ಹೊಂದಿರುವ ಎಲ್ಲ ರೀತಿಯ ಬಾಂಧವ್ಯಗಳನ್ನು ಕಳೆದುಕೊಳ್ಳುವ ಮೊದಲ ಹಂತವಾಗಿ ಅಮೆರಿಕ ಈ ನಿರ್ಧಾರ ತೆಗೆದುಕೊಂಡಿದೆ.

ಕೊರೊನಾ ಸೋಂಕಿನಿಂದ ಅಮೆರಿಕದಲ್ಲಿ ಈವರೆಗೂ 80 ಸಾವಿರಕ್ಕೂ ಅಧಿಕ ಜನರು ಮೃತಪಟ್ಟಿದ್ದಾರೆ. ಕಳೆದ ವರ್ಷದ ಕೊನೆಯಲ್ಲಿ ಚೀನಾದ ವುಹಾನ್‌ ಪ್ರಾಂತ್ಯದಲ್ಲಿ ಕೊರೊನಾ ವೈರಸ್‌ ಸೋಂಕು ಮೊದಲು ಕಾಣಿಸಿಕೊಂಡಿತ್ತು.

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಗುರುವಾರ ಫಾಕ್ಸ್ ಬಿಸಿನೆಸ್ ನ್ಯೂಸ್‌ಗೆ ಸಂದರ್ಶನ ನೀಡಿದ್ದಾರೆ. ಆ ವೇಳೆ ಚೀನಾದ ಪಿಂಚಣಿ ನಿಧಿಯಲ್ಲಿ ಅಮೆರಿಕದ ಹೂಡಿಕೆಯ ಹಣವನ್ನು ಟ್ರಂಪ್‌ ಸರ್ಕಾರ ಹಿಂಪಡೆದಿದೆ ಎಂಬ ವರದಿಗಳ ಬಗ್ಗೆ ಕೇಳಲಾಗಿದೆ. ಅದಕ್ಕೆ ಪ್ರತಿಕ್ರಿಯಿಸಿರುವ ಅವರು, 'ಶತಕೋಟಿ ಡಾಲರ್, ಶತಕೋಟಿ... ಹೌದು, ನಾನು ಅದನ್ನು ಹಿಂಪಡೆದಿದ್ದೇನೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT