ಭಾನುವಾರ, ಏಪ್ರಿಲ್ 18, 2021
32 °C

ಟ್ರಂಪ್‌ ಹೇಳಿಕೆ; ಪಾಕ್‌ ನಿರೀಕ್ಷೆಗೂ ಮೀರಿದ್ದು– ಖುರೇಷಿ ಅಭಿಮತ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಇಸ್ಲಾಮಾಬಾದ್‌: ‘ಕಾಶ್ಮೀರ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮಧ್ಯಸ್ಥಿಕೆ ವಹಿಸಲು ಸಿದ್ಧವಿರುವುದಾಗಿ ಹೇಳಿರುವುದು ಪಾಕಿಸ್ತಾನದ ನಿರೀಕ್ಷೆಗೂ ಮೀರಿದ್ದಾಗಿದೆ’ ಎಂದು ಪಾಕ್‌ ವಿದೇಶಾಂಗ ಸಚಿವ ಶಾ ಮಹಮೂದ್‌ ಖುರೇಷಿ ಹೇಳಿದ್ದಾರೆ.

‘ಭಾರತ ಮತ್ತು ಪಾಕಿಸ್ತಾನದ ನಡುವೆ ಕಾಶ್ಮೀರ ವಿಷಯ ವಿವಾದಾತ್ಮಕ ಅಂಶ ಎಂಬುದನ್ನು ಅಮೆರಿಕ ಅರಿತುಕೊಂಡಿದೆ’ ಎಂದು ಅವರು ಖಾಸಗಿ ಸುದ್ದಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ ಎಂದು ಸರ್ಕಾರಿ ಸ್ವಾಮ್ಯದ ರೇಡಿಯೊ ಪಾಕಿಸ್ತಾನ ವರದಿ ಮಾಡಿದೆ. 

ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರು ಕಳೆದ ವಾರ ಅಮೆರಿ ಕಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಟ್ರಂಪ್‌ ಅವರು ಕಾಶ್ಮೀರ ವಿವಾದ ಬಗೆಹರಿಸಲು ಮಧ್ಯಸ್ಥಿಕೆ ವಹಿಸಲು ಒಲವು ವ್ಯಕ್ತಪಡಿಸಿದ್ದರು. 

ಭಾರತವು ಟ್ರಂಪ್‌ ಅವರ ಸಲಹೆಯನ್ನು ತಿರಸ್ಕರಿಸಿದ್ದು, ಪಾಕಿಸ್ತಾನದ ಜತೆಗಿನ ಎಲ್ಲ ಸಮಸ್ಯೆಗಳನ್ನು ದ್ವೀಪಕ್ಷೀಯ ಮಾತುಕತೆ ಮೂಲಕ ಬಗೆಹರಿಸಿಕೊಲಳ್ಳುವುದಾಗಿ ಹೇಳಿದೆ. 

ಕಾಶ್ಮೀರ ವಿಷಯ ಕುರಿತು ಭಾರತದ ಕಠಿಣ ನಿಲುವು ಭಾರಿ ವೆಚ್ಚವನ್ನುಂಟುಮಾಡುತ್ತದೆ. ಕಣಿವೆಯಲ್ಲಿನ ಪರಿಸ್ಥಿತಿ ಮತ್ತಷ್ಟು ಹದಗೆಡುತ್ತದೆ ಎಂದು ಖುರೇಷಿ ಹೇಳಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು