ಗುರುವಾರ , ಮೇ 6, 2021
25 °C

ಪಾಕಿಸ್ತಾನದಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ನಾಪತ್ತೆ

ಎಎನ್‌ಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ನಾಪತ್ತೆಯಾಗಿರುವುದಾಗಿ ವರದಿಯಾಗಿದೆ. 

ಇಂದು ಬೆಳಗ್ಗೆಯಿಂದ, ಕರ್ತವ್ಯದಲ್ಲಿರುವಾಗಿನಿಂದಲೇ ಅವರು ನಾಪತ್ತೆಯಾಗಿದ್ದಾರೆ. ವಿಚಾರವನ್ನು ವಿದೇಶಾಂಗ ಇಲಾಖೆ ಪರಿಗಣನೆಗೆ ತೆಗೆದುಕೊಂಡಿದೆ. 

ಸಿಬ್ಬಂದಿ ನಾಪತ್ತೆಯಾಗಿರುವ ಕುರಿತು ಮೂಲಗಳ ಮಾಹಿತಿ ಉಲ್ಲೇಖಿಸಿ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. 

ರಾಜತಾಂತ್ರಿಕ ಅಧಿಕಾರಿಗಳ ಕಾರು ಹಿಂಬಾಲಿಸಿದ್ದ ಗುಪ್ತಚರ ಇಲಾಖೆ ಸಿಬ್ಬಂದಿ 

ಭಾರತದ ರಾಜತಾಂತ್ರಿಕ ಅಧಿಕಾರಿ ಗೌರವ್ ಅಹ್ಲುವಾಲಿಯಾ ಅವರ ಕಾರನ್ನು ಇಸ್ಲಾಮಾಬಾದ್‌ನಲ್ಲಿ ಪಾಕಿಸ್ತಾನದ ಗುಪ್ತಚರ ಇಲಾಖೆ (ಐಎಸ್‌ಐ) ಸದಸ್ಯರು ಹಿಂಬಾಲಿಸಿದ್ದರು. ಭಾರತದ ರಾಜತಾಂತ್ರಿಕ ಅಧಿಕಾರಗಳ ನಿವಾಸದ ಹೊರಗೆ ಹಾಗೂ ಸಂಚರಿಸುವ ಮಾರ್ಗದಲ್ಲಿ ಪಾಕಿಸ್ತಾನದ ಗುಪ್ತಚರ ಇಲಾಖೆ ತನ್ನ ಸಿಬ್ಬಂದಿಯನ್ನು ಕಾರು ಮತ್ತು ಬೈಕ್‌ಗಳಲ್ಲಿ ನಿಯೋಜಿಸುತ್ತಿದ್ದ ಬಗ್ಗೆ ಸುದ್ದಿಯಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೊ ಕೂಡ ಬಿಡುಗಡೆಯಾಗಿತ್ತು. 

ಇದನ್ನು ನೋಡಿ: Video| ಭಾರತದ ರಾಜತಾಂತ್ರಿಕ ಅಧಿಕಾರಿಯ ಬೆನ್ನಟ್ಟಿದ ಪಾಕ್‌ ಗುಪ್ತಚರ ಸಿಬ್ಬಂದಿ

ಪತ್ರ ಬರೆದಿದ್ದ ಭಾರತದ ರಾಯಭಾರ ಕಚೇರಿ 

ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಪಾಕಿಸ್ತಾನದ ಏಜೆನ್ಸಿಗಳು ನಿರಂತರವಾಗಿ ಕಿರುಕುಳ ನೀಡುತ್ತಿರುವುದನ್ನು ವಿರೋಧಿಸಿ ಪಾಕಿಸ್ತಾನದ ಭಾರತೀಯ ಹೈಕಮಿಷನ್ ಇಸ್ಲಾಮಾಬಾದ್‌ನ ವಿದೇಶಾಂಗ ಸಚಿವಾಲಯಕ್ಕೆ ಮಾರ್ಚ್‌ನಲ್ಲಿ ಪ್ರತಿಭಟನಾ ಟಿಪ್ಪಣಿಯನ್ನು ರವಾನಿಸಿತ್ತು.
ಅಧಿಕಾರಿಗಳಿಗೆ ಕಿರುಕುಳ ನೀಡಿದ 13 ಪ್ರಸಂಗಗಳನ್ನು ಉಲ್ಲೇಖಿಸಿ ಭಾರತವು ಪಾಕಿಸ್ತಾನಕ್ಕೆ ಪತ್ರ ಬರೆದಿತ್ತು. ಅಲ್ಲದೆ, ಈ ಎಲ್ಲ ಪ್ರಕರಣಗಳ ತನಿಖೆಗೆ ಒತ್ತಾಯಿಸಿತ್ತು ಎನ್ನಲಾಗಿದೆ.

ಹೀಗಿರುವಾಗಲೇ ರಾಯಭಾರ ಕಚೇರಿಯ ಇಬ್ಬರು ಅಧಿಕಾರಿಗಳು ಕಾಣೆಯಾಗಿರುವುದು ಆತಂಕಕ್ಕೆ ಕಾರಣವಾಗಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು