ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುಎಇ: ನಿರ್ಗಮಿತ ರಾಯಭಾರಿಗೆ ‘ಝಯೇದ್‌–2’ ಗೌರವ

Last Updated 12 ಸೆಪ್ಟೆಂಬರ್ 2019, 20:00 IST
ಅಕ್ಷರ ಗಾತ್ರ

ದುಬೈ: ಯುಎಇಯಲ್ಲಿ ಭಾರತೀಯ ರಾಯಭಾರಿ ಹುದ್ದೆಯಿಂದ ನಿರ್ಗಮಿಸುತ್ತಿರುವ ನವದೀಪ್‌ ಸಿಂಗ್‌ ಸೂರಿ ಅವರಿಗೆ ಯುಎಇ ಸರ್ಕಾರವು ಪ್ರತಿಷ್ಠಿತ ‘ಆರ್ಡರ್‌ ಆಫ್‌ ಝಯೇದ್‌–2’ ಪುರಸ್ಕಾರ ನೀಡಿ ಗೌರವಿಸಿದೆ.

2016ರ ಅಕ್ಟೋಬರ್‌ನಿಂದ ಕೊಲ್ಲಿ ರಾಷ್ಟ್ರದಲ್ಲಿ ಭಾರತದ ರಾಯಭಾರಿ ಆಗಿದ್ದ ಅವರು ಉಭಯ ದೇಶಗಳ ನಡುವಿನ ಸಂಬಂಧ ಮತ್ತು ಸಹಕಾರ ವೃದ್ಧಿಗೆ ಶ್ರಮಿಸಿದ್ದಾರೆ. ಇದಕ್ಕಾಗಿ ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಝಯೇದ್‌ ಅಲ್‌ ನಹ್ಯಾನ್‌ ಪ್ರಶಸ್ತಿ ನೀಡಿದರು.

ಸೂರಿ ಅವರ ಅವಧಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ಭಾರಿ ಯುಎಇಗೆ
ಭೇಟಿ ನೀಡಿದ್ದರು ಎಂದು ಅಲ್ಲಿನ ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT