ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡು ದಿನಗಳಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ: ಸಿದ್ದರಾಮಯ್ಯ

Last Updated 24 ಏಪ್ರಿಲ್ 2018, 8:01 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಎರಡು ದಿನಗಳಲ್ಲಿ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಬಿಡುಗಡೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಬಾದಾಮಿ ಹಾಗೂ ಚಾಮುಂಡೇಶ್ವರಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇನೆ. ಬಾದಾಮಿಯಲ್ಲಿ ಒಂದು ದಿನ ಪ್ರಚಾರ ಮಾಡಲಿದ್ದೇನೆ ಎಂದು ಅವರು ಹೇಳಿದರು.

ಸಮೀಕ್ಷೆ ನಂಬುವುದಿಲ್ಲ: ರಾಜ್ಯದಲ್ಲಿ ಅತಂತ್ರ ವಿಧಾನಸಭೆ ಏರ್ಪಡಲಿದೆ ಎಂಬ ಸಮೀಕ್ಷೆ ಬಗ್ಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ನಾನು ಯಾವ ಸಮೀಕ್ಷೆಯನ್ನೂ ನಂಬುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಐಟಿ ದುರುಪಯೋಗ’: ಸಚಿವ ಮಹದೇವಪ್ಪ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿರುವ ಬಗ್ಗೆ ನನಗೆ ಮಾಹಿತಿ ಇಲ್ಲ. ಒಂದು ವೇಳೆ ದಾಳಿ ನಡೆದಿದ್ದರೆ, ಅದು ರಾಜಕೀಯ ಪ್ರೇರಿತ. ಕೇಂದ್ರ ಸರ್ಕಾರ ಐಟಿ ಇಲಾಖೆಯನ್ನು ದುರುಪಯೋಗ ಮಾಡಿಕೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ದೂರಿದರು.

‘ಐಟಿ ದಾಳಿ ಮಾಡಿ ನಮ್ಮ ಪಕ್ಷದ ಮುಖಂಡರನ್ನು ಹೆದರಿಸುವ ತಂತ್ರವಾಗಿದೆ. ಇದೊಂದು ರಾಜಕೀಯ ಹುನ್ನಾರ. ಇದನ್ನು ಖಂಡಿಸುತ್ತೆನೆ. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಯಡಿಯೂರಪ್ಪ ಮತ್ತು ಜಗದೀಶ್ ಶೆಟ್ಟರ್ ಮನೆ ಮೇಲೆ ಯಾಕೆ ಐಟಿ ದಾಳಿ ಆಗಿಲ್ಲ’ ಎಂದು ಅವರು ಪ್ರಶ್ನಿಸಿದರು.

‘ಯಾರಾದರೂ ಸ್ಪರ್ಧಿಸಲಿ’: ‘ಬಾದಾಮಿಯಲ್ಲಿ ಯಡಿಯೂರಪ್ಪ, ಶ್ರೀರಾಮುಲು ಸೇರಿದಂತೆ ಯಾರು ಬೇಕಾದರೂ ಚುನಾವಣೆಯಲ್ಲಿ ಸ್ಪರ್ಧಿಸಲಿ. ನಾನು ಬಹುಮತದಿಂದ ಗೆಲ್ಲುತ್ತೇನೆ. ಉತ್ತರ ಕರ್ನಾಟಕದ ಜನರ ಆಸೆಯಂತೆ ನಾನು ಅಲ್ಲಿ ಸ್ಪರ್ಧೆ ಮಾಡುತ್ತಿದ್ದೆನೆ. ವರುಣಾ ಕ್ಷೇತ್ರದಲ್ಲಿ ಯಾರೇ ಸ್ಪರ್ಧಿಸಿದರೂ 5೦ ಸಾವಿರ ಮತಗಳ ಅಂತರದಿಂದ ಗೆಲ್ಲುತ್ತೇವೆ’ ಎಂದು ಅವರು ಹೇಳಿದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT