ಭಾನುವಾರ, ಜೂಲೈ 5, 2020
28 °C

ಕೋವಿಡ್–19 ಲಸಿಕೆ ಮಾತ್ರವೇ ಜಗತ್ತನ್ನು ಸಹಜ ಸ್ಥಿತಿಗೆ ಮರಳಿಸಬಲ್ಲದು: ಗುಟೆರಸ್

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಬಹುಶಃ ಕೋವಿಡ್‌–19 ಲಸಿಕೆ ಮಾತ್ರವೇ ಜಗತ್ತನ್ನು ಸಹಜ ಸ್ಥಿತಿಗೆ ಮರಳಿಸಬಲ್ಲದು. ಈ ವರ್ಷಾಂತ್ಯದೊಳಗೆ ಅದನ್ನು ಕಂಡುಹಿಡಿಯುವ ವಿಶ್ವಾಸವಿದೆ ಎಂದು ವಿಶ್ವಸಂಸ್ಥೆಯ ಮಹಾಕಾರ್ಯದರ್ಶಿ ಆಂಟೊನಿಯೊ ಗುಟೆರಸ್ ಹೇಳಿದ್ದಾರೆ.

ವಿಶ್ವಸಂಸ್ಥೆಯ ಸದಸ್ಯತ್ವ ಹೊಂದಿರುವ ಆಫ್ರಿಕಾದ ಸುಮಾರು ಐವತ್ತಕ್ಕೂ ಹೆಚ್ಚು ರಾಷ್ಟ್ರಗಳ ನಾಯಕರೊಂದಿಗೆ ವಿಡಿಯೊ ಕಾನ್ಫರೆನ್ಸ್‌ ಮೂಲಕ ಮಾತುಕತೆ ನಡೆಸಿದ ಗುಟೆರಸ್‌, ‘ಸುರಕ್ಷಿತ ಮತ್ತು ಪರಿಣಾಮಕಾರಿಯಾದ ಲಸಿಕೆಯು ಜಗತ್ತನ್ನು ಸಾಮಾನ್ಯ ಸ್ಥಿತಿಗೆ ಹಿಂದಿರುಗಿಸಲು ಇರುವ ಏಕೈಕ ಸಾಧನ. ಇದು ಲಕ್ಷಾಂತರ ಜೀವಗಳನ್ನು ಕಾಪಾಡಲಿದೆ ಮತ್ತು ಲೆಕ್ಕವಿಲ್ಲದಷ್ಟು ಹಣವನ್ನು ಉಳಿಸುತ್ತದೆ’ ಎಂದು ಹೇಳಿದ್ದಾರೆ.

ಜಾಗತಿಕ ಪಿಡುಗಿನ ನಿಯಂತ್ರಣಕ್ಕೆ ಸಾಮರಸ್ಯದಿಂದ ಕೈ ಜೋಡಿಸುವಂತೆ ಕರೆ ನೀಡಿರುವ ಅವರು, ಲಸಿಕೆಯನ್ನು ಕಂಡುಹಿಡಿಯುವ ನಿಟ್ಟಿನಲ್ಲಿ ಎಲ್ಲರೂ ನಾವು ಮಹತ್ವಾಕಾಂಕ್ಷೆಯಿಂದ ಪ್ರಯತ್ನ ಮಾಡಬೇಕು. 2020ರ ಅಂತ್ಯದ ವೇಳೆಗೆ ಎಲ್ಲರಿಗೂ ಲಸಿಕೆ ದೊರೆಯುವಂತಾಗಬೇಕು ಎಂದು ಹೇಳಿದ್ದಾರೆ.

ಜಾಗತಿಕ ಪಿಡುಗಿನ ವಿರುದ್ಧ ವಿಶ್ವಸಂಸ್ಥೆಯ ಮಾನವೀಯ ಕಾರ್ಯಗಳಿಗಾಗಿ ₹ 15 ಸಾವಿರ ಕೋಟಿ ದೇಣಿಗೆ ನೀಡುವಂತೆ ಗುಟೆರಸ್‌ ಮಾರ್ಚ್‌ 25 ರಂದು ಕರೆ ನೀಡಿದ್ದರು. ಆ ಬಗ್ಗೆ ಮಾತನಾಡಿದ ಅವರು, ಬೇಡಿಕೆ ಮೊತ್ತದ ಶೇ. 20 ರಷ್ಟು ದೇಣಿಗೆ ಇದುವರೆಗೆ ಸಂಗ್ರಹವಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಆಫ್ರಿಕಾದ 47 ಸದಸ್ಯ ರಾಷ್ಟ್ರಗಳಲ್ಲಿ ವಿಶ್ವ ಆರೋಗ್ಯ ಸಂಸ್ಥೆಯ ಮೂಲಕ ಕೋವಿಡ್‌–19 ಪರೀಕ್ಷೆ ನಡೆಸಲು ಸಜ್ಜಾಗಿರುವುದಾಗಿಯೂ ತಿಳಿಸಿದ್ದಾರೆ.

ಮಾತ್ರವಲ್ಲದೆ, ಸೋಂಕು ನಿಯಂತ್ರಣಕ್ಕಾಗಿ ಆಫ್ರಿಕಾ‌ ಸರ್ಕಾರಗಳು ಮಾಡಿದ ಪ್ರಯತ್ನವನ್ನು ಶ್ಲಾಘಿಸಿದ್ದಾರೆ. ಅದಕ್ಕೆ ಪೂರಕವಾಗಿ ಉಗಾಂಡದಲ್ಲಿ ಜನರು ಆದಾಯ ತೆರಿಗೆ ಮರುಪಾವತಿಗೆ ಹೆಚ್ಚುವರಿ ಸಮಯ ನಿಗದಿ ಪಡಿಸಿರುವುದು, ನಮೀಬಿಯಾದಲ್ಲಿ ಕೆಲಸ ಕಳೆದುಕೊಂಡವರಿಗಾಗಿ ತುರ್ತು ಆದಾಯ ಯೋಜನೆ ರೂಪಿಸಿರುವುದು, ಕೇಪ್‌ ವೆರ್ಡ್‌ನಲ್ಲಿ ಆಹಾರ ನೆರವು ನೀಡುತ್ತಿರುವುದು ಮತ್ತು ಈಜಿಪ್ಟ್‌ನಲ್ಲಿ ಕೈಗಾರಿಕೆಗಳಿಗೆ ತೆರಿಗೆ ವಿನಾಯಿತಿ ನೀಡಿರುವುದನ್ನು ಉಲ್ಲೇಖಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು