ಸೋಮವಾರ, ಅಕ್ಟೋಬರ್ 21, 2019
21 °C

ವಿಶ್ವಸಂಸ್ಥೆಗೂ ಬಂದಿದೆ ಹಣದ ಕೊರತೆ: ಗುಟೆರಸ್‌

Published:
Updated:
prajavani

ವಿಶ್ವಸಂಸ್ಥೆ: ವಿಶ್ವಸಂಸ್ಥೆ ₹1,637 ಕೋಟಿ ಹಣಕಾಸಿನ ಕೊರತೆ ಎದುರಿಸುತ್ತಿದೆ ಎಂದು ಮಹಾ ಪ್ರಧಾನ ಕಾರ್ಯದರ್ಶಿ ಆಂಟೊನಿಯೊ ಗುಟೆರಸ್‌ ತಿಳಿಸಿದ್ದಾರೆ. 

ಅಕ್ಟೋಬರ್ ಅಂತ್ಯದ ವೇಳೆಗೆ ಖರ್ಚಿಗೆ ಹಣವಿಲ್ಲದ ಸ್ಥಿತಿ ಎದುರಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ವೇತನ ಮತ್ತು ಭತ್ಯೆಗಳ ಪಾವತಿಯನ್ನು ಖಚಿತಪಡಿಸಿಕೊಳ್ಳಲು ಹೆಚ್ಚುವರಿ ಕ್ರಮಗಳನ್ನು ತೆಗೆದುಕೊಳ್ಳುವುದು ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಗತ್ಯ ಎಂದು ವಿಶ್ವಸಂಸ್ಥೆಯ ಸೆಕ್ರೆಟರಿಯೇಟ್ ಸಿಬ್ಬಂದಿಯನ್ನು ಉದ್ದೇಶಿಸಿ ಗುಟೆರಸ್‌ ಬರೆದಿರುವ ಪತ್ರದಲ್ಲಿ ತಿಳಿಸಲಾಗಿದೆ. 

2019ರಲ್ಲಿ ನಮ್ಮ ನಿಯಮಿತ ಬಜೆಟ್ ಕಾರ್ಯಾಚರಣೆಗಳಿಗೆ ಅಗತ್ಯವಾದ ಒಟ್ಟು ಮೊತ್ತದ ಶೇ 70ರಷ್ಟು ಮಾತ್ರ ಸದಸ್ಯ ರಾಷ್ಟ್ರಗಳು ಪಾವತಿಸಿವೆ. ಇದು ಸೆಪ್ಟೆಂಬರ್ ಅಂತ್ಯದ ವೇಳೆಗೆ  ₹1,637 ಕೋಟಿ ನಗದು ಕೊರತೆಗೆ ಕಾರಣವಾಗಿದೆ. ಆದ್ದರಿಂದ ವೆಚ್ಚ ಕಡಿತದ ಕ್ರಮ ಅನುಸರಿಸಬೇಕಾಗಿದೆ ಎಂದು ಅವರು ಹೇಳಿದ್ದಾರೆ.

Post Comments (+)