ಶಾಂತಿಪಾಲನಾ ಪಡೆ ಹುತಾತ್ಮ ಯೋಧಗೆ ವಿಶ್ವಸಂಸ್ಥೆ ಪದಕ

ಮಂಗಳವಾರ, ಜೂನ್ 25, 2019
24 °C

ಶಾಂತಿಪಾಲನಾ ಪಡೆ ಹುತಾತ್ಮ ಯೋಧಗೆ ವಿಶ್ವಸಂಸ್ಥೆ ಪದಕ

Published:
Updated:

ವಿಶ್ವಸಂಸ್ಥೆ: ಕಾಂಗೊದಲ್ಲಿ ನಿಯೋಜಿಸಲಾಗಿದ್ದ ಶಾಂತಿ ಪಾಲನಾ ಪಡೆಯಲ್ಲಿ ಸೇವೆ ಸಲ್ಲಿಸುವಾಗ ಹುತಾತ್ಮರಾದ ಭಾರತೀಯ ಯೋಧ ಜಿತೇಂದ್ರ ಕುಮಾರ್‌ ಅವರಿಗೆ ವಿಶ್ವಸಂಸ್ಥೆಯು ಮರಣೋತ್ತರವಾಗಿ ‘ಡ್ಯಾಗ್‌ ಹ್ಯಾಮರ್‌ಸ್ಕೋಲ್ಡ್‌ ಪದಕ’ ನೀಡಿ ಗೌರವಿಸಲಿದೆ.

ಶುಕ್ರವಾರ (ಮೇ 24) ನಡೆಯಲಿರುವ ವಿಶ್ವಸಂಸ್ಥೆಯ ಶಾಂತಿಪಾಲಕರ ಅಂತರರಾಷ್ಟ್ರೀಯ ದಿನಾಚರಣೆಯಲ್ಲಿ ಈ ಪದಕವನ್ನು ಪ್ರದಾನ ಮಾಡಲಾಗುತ್ತದೆ. ವಿಶ್ವಸಂಸ್ಥೆಯಲ್ಲಿರುವ ಭಾರತದ ಶಾಶ್ವತ ಪ್ರತಿನಿಧಿ ಸೈಯದ್‌ ಅಕ್ಬರುದ್ದೀನ್‌ ಅವರು ಹುತಾತ್ಮ ಯೋಧನ ಪರವಾಗಿ ಈ ಪದಕವನ್ನು ಸ್ವೀಕರಿಸುವರು.

ವಿವಿಧ ದೇಶಗಳಲ್ಲಿ ಶಾಂತಿ ಪಾಲನೆಗಾಗಿ ನಿಯೋಜನೆಗೊಂಡಿದ್ದ ಸಂದರ್ಭದಲ್ಲಿ ಹುತಾತ್ಮರಾದ ಯೋಧರು, ಪೊಲೀಸರು ಹಾಗೂ ನಾಗರಿಕ ಸಿಬ್ಬಂದಿ ಸೇರಿದಂತೆ ಒಟ್ಟು 119 ಜನರಿಗೆ ಮರಣೋತ್ತರವಾಗಿ ಗೌರವಿಸಲಾಗುತ್ತದೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !